Advertisement
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗಳಡಿ ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿತ ಸಮಯದಲ್ಲಿ ಬಳಕೆ ಮಾಡಬೇಕು. ಜಿಪಂ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಡಾ| ಬಿ.ಆರ್. ಅಂಬೇಡ್ಕರ್ ಆವಾಸ್ ಎಸ್ಸಿ-ಎಸ್ಟಿ ವಸತಿ ರಹಿತ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಗುರಿ ನಿಗದಿ ಪಡಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಪರಿಶಿಷ್ಟ ಜಾತಿಯವರಿಗೆ 5659 ಮನೆಗಳ ನಿರ್ಮಾಣಕ್ಕೆ 103 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಆದರೆ ಇದುವರೆಗೆ 963 ಮನೆಗಳ ನಿರ್ಮಾಣ ಮಾತ್ರ ಪೂರ್ಣಗೊಂಡಿದ್ದು, 4696 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪರಿಶಿಷ್ಟ ಪಂಗಡದವರಿಗೆ 4500 ಮನೆಗಳ ನಿರ್ಮಾಣ ಕಾರ್ಯಕ್ಕೆ 84 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ ಮನೆಗಳ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸೂರು ರಹಿತ ಬಡವರಿಗೆ ಮನೆ ಕಲ್ಪಿಸಲು ಸರ್ಕಾರ ವಸತಿ ಯೋಜನೆ ರೂಪಿಸಿದೆ. ಯೋಜನೆಯ ಸಮರ್ಪಕ ಜಾರಿಗೆ ಅಧಿಕಾರಿಗಳು ಪ್ರಾಮಾಣಿಕ ಯತ್ನ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Related Articles
Advertisement
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಟಾರ್ಪಾಲಿನ್ ವಿತರಣೆಗೆ ಹೆಚ್ಚು ಆದ್ಯತೆ ನೀಡಿರುವುದು ಸರಿಯಲ್ಲ. ಜನರ ಮನವೊಲಿಸಿ ಕೃಷಿ ಸಂಸ್ಕರಣೆ ಘಟಕದ ಯೋಜನೆ ಬಳಸಿಕೊಳ್ಳಲು ಅರಿವು ಮೂಡಿಸಬೇಕು ಎಂದರು.
ಒಂದು ಕುಟುಂಬದಲ್ಲಿ ಎರಡು ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಯ ಸೌಲಭ್ಯ ಮಂಜೂರಾತಿಗೆ ಅವಕಾಶವಿದ್ದು, ಜಿಲ್ಲೆಯಲ್ಲಿ 89,350 ನೋಂದಣಿಯಾಗಿವೆ. ಬಹುತೇಕ ಫಲಾನುಭವಿಗಳಿಗೆ ಬಾಂಡ್ ವಿತರಣೆ ಮಾಡಲಾಗಿದ್ದು, 8 ಸಾವಿರ ಬಾಂಡ್ ವಿತರಿಸುವುದು ಬಾಕಿ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾ ನಾಯಕ್ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಪರಿಶಿಷ್ಟ ಪಂಗಡದ ಜಿಲ್ಲಾ ಕಲ್ಯಾಣಾಧಿಕಾರಿ ಜೆ. ರಾಜು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.