Advertisement
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 4ರಂದು ಆಟ ಆಡುವ ಸಮಯ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಬಿದ್ದು ತಲೆಗೆ ಏಟಾಗಿತ್ತು ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ಬದಲಾಗಿ ಮಕ್ಕಳಿಂದಲೇ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಶನಿವಾರ ಸಭೆ ನಡೆಸಿ ಮುಂದೆ ಇಂತಹ ಘಟನೆ ಮರುಕಳಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಶಿಕ್ಷಕರು ತಿಳಿಸಿದ್ದಾರೆ. ಮಾಹಿತಿ ಪಡೆದಿದ್ದೇನೆ
ಘಟನೆ ಕುರಿತು ಮಾಹಿತಿ ಪಡೆದಿದ್ದೇನೆ. ಮಗು ಆರೋಗ್ಯವಾಗಿದೆ. ಸಿ.ಆರ್.ಪಿ.ಗಳು ಶಾಲೆಗೆ ಭೇಟಿ ನೀಡಿದ್ದಾರೆ. ಶಿಕ್ಷಕರು ಈ ರೀತಿ ವರ್ತಿಸಬಾರದಿತ್ತು. ಸೋಮವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ವಿರೂಪಾಕ್ಷಪ್ಪ ಅವರು ಹೇಳಿದ್ದಾರೆ.