ಬೆಂಗಳೂರು: ವಿರೋಧಗಳ ಬಗ್ಗೆ ತಲೆಕೆಡಿಸಿ ಕೊಳ್ಳದೆ ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸ ಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ “ರಾಷ್ಟ್ರೀಯ ಶಿಕ್ಷಣ ನೀತಿ-2020′ ಕುರಿತ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಭ ಸಚಿವರು ಈ ವಿಚಾರ ತಿಳಿಸಿದರು.
ಹೊಸ ಶೈಕ್ಷಣಿಕ ನೀತಿ ಜಾರಿಗಾಗಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಅದರ ವರದಿ ಬಂದ ಬಳಿಕ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರದಲ್ಲಿ ಪ್ರಿಯಾಂಕಾ ಖರ್ಗೆ ಆರೋಪಕ್ಕೆ ನನ್ನ ಸಹಮತವಿದೆ : ಪರಮೇಶ್ವರ್
ಹೊಸ ನೀತಿಯ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡದವರು ಮಾತ್ರ ಅದನ್ನು ವಿರೋಧಿಸುತ್ತಿದ್ದಾರೆ ಎಂದರು.