Advertisement

ವಿರೋಧಕ್ಕೆ ನಿರ್ಲಕ್ಷ್ಯ ; ಎನ್‌ಇಪಿ ಖಚಿತ

01:36 AM Nov 11, 2021 | Team Udayavani |

ಬೆಂಗಳೂರು: ವಿರೋಧಗಳ ಬಗ್ಗೆ ತಲೆಕೆಡಿಸಿ ಕೊಳ್ಳದೆ ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸ ಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ.

Advertisement

ಬೆಂಗಳೂರಿನಲ್ಲಿ ನಡೆದ “ರಾಷ್ಟ್ರೀಯ ಶಿಕ್ಷಣ ನೀತಿ-2020′ ಕುರಿತ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಭ ಸಚಿವರು ಈ ವಿಚಾರ ತಿಳಿಸಿದರು.

ಹೊಸ ಶೈಕ್ಷಣಿಕ ನೀತಿ ಜಾರಿಗಾಗಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಟಾಸ್ಕ್ ಫೋರ್ಸ್‌ ರಚನೆ ಮಾಡಲಾಗಿದ್ದು, ಅದರ ವರದಿ ಬಂದ ಬಳಿಕ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರದಲ್ಲಿ ಪ್ರಿಯಾಂಕಾ ಖರ್ಗೆ ಆರೋಪಕ್ಕೆ ನನ್ನ ಸಹಮತವಿದೆ : ಪರಮೇಶ್ವರ್

ಹೊಸ ನೀತಿಯ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡದವರು ಮಾತ್ರ ಅದನ್ನು ವಿರೋಧಿಸುತ್ತಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next