Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಗತ್ಯ ತನಿಖೆ ನಡೆಯುವವರೆಗೂ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ಬಗ್ಗೆ ಮಾತನಾಡಬಾರದು. ರಾಜ್ಯದ ಪೊಲೀಸರೇ ಸಮರ್ಥರಿದ್ದು, ಇಲ್ಲಿನ ಯಾವುದೇ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ಅಗತ್ಯವಿಲ್ಲ. ಇಂತಹ ಪ್ರಕರಣಗಳು ನಡೆದಾಗ ಸೂಕ್ಷ್ಮತೆ ಅರಿತು ಸರಕಾರಗಳು ಹೇಳಿಕೆ ನೀಡಬೇಕಾಗುತ್ತದೆ. ಕರ್ನಾಟಕ ಪೊಲೀಸ್ ಇಂದಿಗೂ ಶಕ್ತಿಶಾಲಿಯಾಗಿದೆ. ನೇಹಾ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯ ಹೊರಗೆ ಬರುವವರೆಗೂ ಎಲ್ಲರೂ ಕಾಯಬೇಕು ಎಂದು ಹೇಳಿದರು.
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹಂತಕ ಫಯಾಜ್‌ನ ರಕ್ತದ ಮಾದರಿಯನ್ನು ಸಿಐಡಿ ತನಿಖಾಧಿಕಾರಿಗಳು ಶನಿವಾರ ನ್ಯಾಯಾಧೀಶರ ಸಮ್ಮುಖದಲ್ಲಿ ಸಂಗ್ರಹಣೆ ಮಾಡಿದರು. ಪ್ರಕರಣದ ತನಿಖೆ ಸಂದರ್ಭ ಅಧಿಕಾರಿಗಳಿಗೆ ಕೃತ್ಯ ನಡೆದ ಸ್ಥಳದಲ್ಲಿ ಹಾಗೂ ಆಪಾದಿತ ಕೊಲೆ ಮಾಡಲು ಬಳಸಿದ್ದ ಚಾಕುವಿನ ಮೇಲೆ ಎರಡು ರಕ್ತದ ಗುಂಪುಗಳು ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ದೃಢಪಡಿಸಿಕೊಳ್ಳಲು ಫಯಾಜ್‌ನ ಡಿಎನ್‌ಎ ಪರೀಕ್ಷೆ ನಡೆಸಬೇಕಾಗುತ್ತದೆ. ಅದಕ್ಕೆ ಅನುಮತಿ ನೀಡಬೇಕೆಂದು ತನಿಖಾಧಿಕಾರಿಗಳು ಇಲ್ಲಿನ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಾಧೀಶರು ಪರಿಗಣಿಸಿದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆಪಾದಿತನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಸಿಐಡಿ ಅಧಿಕಾರಿಗಳು ಫಯಾಜ್‌ನ ಡಿಎನ್‌ಎ ಪರೀಕ್ಷೆ ಜತೆಗೆ ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಮೇರೆಗೆ ಫಯಾಜ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಎ. 29ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.