Advertisement
ಹಂತಕ ಫಯಾಜ್ ನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರೆ, ಈ ಪ್ರತಿಭಟನೆಗೆ ಮುಸ್ಲಿಂ ಸಮಾಜ ಬಾಂಧವರೂ ಸಾಥ್ ನೀಡಿ, ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.ಮುನವಳ್ಳಿ-ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಯವರು, ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಾದ್ಯಂತ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಯುತ್ತಿವೆ.