ಮಹಾನಗರ, ನ. 14: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಶನಿವಾರ ನಗರದ ನೆಹರೂ ಮೈದಾನದಲ್ಲಿ ಜರಗಿತು. ಮೈದಾನದಲ್ಲಿರುವ ನೆಹರೂ ಅವರ ಪ್ರತಿಮೆಗೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಲಾಯಿತು.
ಮಾಜಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಮೊದಿನ್ ಬಾವಾ, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಹರಿನಾಥ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಲ್ಯಾನ್ಸ್‌ಲಾಟ್ ಪಿಂಟೋ, ಸುರೇಶ್ ಶೆಟ್ಟಿ , ಟಿ.ಕೆ. ಸುಧೀರ್, ಸಂತೋಷ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ, ವಿಶ್ವಾಸ್‌ದಾಸ್, ಅಬ್ದುಲ್ ಸಲೀಂ, ನವೀನ್ ಡಿ’ಸೋಜಾ, ಅಬ್ದುಲ್ ಲತೀಫ್, ಶಂಸುದ್ದೀನ್, ಪ್ರಕಾಶ್ ಸಾಲ್ಯಾನ್, ಕೋಡಿ ಜಾಲ್ ಇಬ್ರಾಹಿಂ, ಅಬ್ದುಲ್ ರವೂ ಫ್ ಉಪಸ್ಥಿತರಿದ್ದರು.
ಭಾರತ ಸೇವಾದಳ :
ಭಾರತ ಸೇವಾದಳದ ದ.ಕ. ಜಿಲ್ಲಾ ಘಟಕದ ವತಿಯಿಂದ ಶನಿವಾರ ಪಾಂಡೇಶ್ವರದಲ್ಲಿರುವ ನೆಹರೂ ಪ್ರತಿಮೆಗೆ ಹೂ ಹಾರ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಪ್ರಧಾನಿ ಪಂಡಿತ್ ಜವಾ ಹರ ಲಾಲ್ ನೆಹರೂ ಅವರ ಜನ್ಮದಿನವನ್ನು ಆಚರಿಸಲಾಯಿತು.
ಜಿಲ್ಲಾ ಭಾರತ ಸೇವಾದಳದ ಅಧ್ಯಕ್ಷ ಬಶೀರ್ ಬೈಕಂಪಾಡಿ ಮಾತನಾಡಿ, ನೆಹರೂ ಅವರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದವರು. ಪಂಚವಾರ್ಷಿಕ ಯೋಜನೆಯನ್ನು ರೂಪಿಸಿ, ಅನೇಕ ಕೈಗಾರಿಕೆ ಮತ್ತು ಉದ್ಯಮಗಳನ್ನು ದೇಶಾ ದ್ಯಂತ ಸ್ಥಾಪಿಸಿ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸಿದ್ದರು. ನೆಹರೂ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿ¤ದೆ ಎಂದರು. ಸೇವಾದಳ ತಾಲೂಕು ಅಧ್ಯಕ್ಷ ಪ್ರಭಾಕರ್ ಶ್ರೀಯಾನ್, ಎ. ಸುರೇಶ್ ಶೆಟ್ಟಿ, ಉದಯ್ ಕುಂದರ್, ಕೃತಿನ್ ಕುಮಾರ್, ಶೋಭಾ ಕೇಶವ, ಪಾವನಾ, ಅರುಣಾ, ಸುಮಾ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಟಿ.ಕೆ. ಸುಧೀರ್ ಸ್ವಾಗತಿಸಿ, ಮಂಜೇಗೌಡ ನಿರ್ವಹಿಸಿದರು.