ನವದೆಹಲಿ: ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ ಎಂದು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಇಂಡಿಯಾ ಟುಡೇಗೆ ತಿಳಿಸಿದರು.
ಭಾರತದ 77 ನೇ ಸ್ವಾತಂತ್ರ್ಯ ದಿನದಂದು ಈ ಹೆಸರನ್ನು ಅಧಿಕೃತಗೊಳಿಸಲಾಗಿದೆ. ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯದ ಕಾರ್ಯಕಾರಿ ಮಂಡಳಿಯ ಉಪಾಧ್ಯಕ್ಷರು ಕೂಡ ಟ್ವಿಟರ್‌ನಲ್ಲಿ ಮರುನಾಮಕರಣಗೊಂಡ ಕುರಿತು ಪೋಸ್ಟ್ ಹಾಕಿದ್ದು ಇದರಲ್ಲಿ “ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (NMML) ಈಗ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಎಂದು ಆಗಸ್ಟ್ 14, 2023 ಪೋಸ್ಟ್ ಮಾಡಲಾಗಿದೆ.
ಕಳೆದ ಜೂನ್ ಮಧ್ಯದಲ್ಲಿ, ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (NMML) ಸೊಸೈಟಿಯ ವಿಶೇಷ ಸಭೆಯಲ್ಲಿ ಅದರ ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ಸೊಸೈಟಿಯ ಉಪಾಧ್ಯಕ್ಷ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಹೊಸ ಹೆಸರಿನ ಮೇಲೆ ಅಂತಿಮವಾಗಿ ಅಧಿಕೃತ ಮುದ್ರೆ ಹಾಕಲು ಕೆಲವು ಆಡಳಿತಾತ್ಮಕ ಪ್ರಕ್ರಿಯೆಗಳ ಅಗತ್ಯವಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿವೆ.
ಇದನ್ನೂ ಓದಿ: Toby Movie ಆ. 25ರಂದು ಟೋಬಿ ತೆರೆಗೆ: “ಗರುಡ ಗಮನ..’ಕ್ಕೂ “ಟೋಬಿ’ಗೂ ಸಂಬಂಧವಿಲ್ಲ