Advertisement

ನವ ಭಾರತ ನಿರ್ಮಾಣಕ್ಕೆ ನೆಹರು ಅವರಿಂದ ಭದ್ರ ಬುನಾದಿ

09:13 PM Aug 08, 2021 | Team Udayavani |

ಬೆಂಗಳೂರು: ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್‌ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Advertisement

ಭಾನುವಾರ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್‌ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ ಮಾತನಾಡಿದರು. ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ನೆಹರು ಅವರು, ಕೈಗಾರಿಕೆ ಸೇರಿ ಹಲವಾರು ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ತಿಳಿಸಿದರು.

ಇದನ್ನೂ ಓದಿ:ಆಗಸ್ಟ್ 11 ದರ್ಶನ್ ಅವರಿಗೆ ವಿಶೇಷವಾದ ದಿನ : ಸಂಭ್ರಮಕ್ಕೆ ಸಜ್ಜಾಗಿದೆ ‘ಡಿ ಬಾಸ್’ ಪಡೆ  

ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಪರ್ಕ ಹೊಂದಿ ಕಾರ್ಯನಿರ್ವಹಿಸಿದವರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜೈಲು ವಾಸ ಅನುಭವಿಸಿದ ನೆಹರೂರವರ ಆದರ್ಶಗಳ ಪಾಲನೆ ನಮ್ಮೆಲ್ಲರ ಕರ್ತವ್ಯ. ಮೆಟ್ರೋ ಕಾಮಗಾರಿಯಿಂದಾಗಿ ಸ್ಥಳಾಂತರಗೊಂಡಿದ್ದ ಮಾಜಿ ಪ್ರಧಾನಿ ನೆಹರು ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪಿಸುವ ಮೂಲಕ ವಿಧಾನಸೌಧದ ಮೆರಗು ಹೆಚ್ಚಿಸಿದಂತಾಗಿದೆ ತಿಳಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next