Advertisement

ಜಮ್ಮ-ಕಾಶ್ಮೀರ; ನೆಹರು ಐತಿಹಾಸಿಕ ತಪ್ಪನ್ನು ಮೋದಿ ಈಗ ಸರಿಪಡಿಸಿದ್ದಾರೆ-ರವಿಶಂಕರ್

10:03 AM Sep 13, 2019 | Nagendra Trasi |

ನವದೆಹಲಿ:ಜಮ್ಮು-ಕಾಶ್ಮೀರದ ವಿಚಾರದಲ್ಲಿ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ತಪ್ಪು ನಿರ್ಧಾರ ಕೈಗೊಂಡಿದ್ದರು. ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ನಿಲುವು ಸರಿಯಾಗಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಧೈರ್ಯದಿಂದ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಐತಿಹಾಸಿಕ ಪ್ರಮಾದವನ್ನು ಸರಿಪಡಿಸಿದ್ದಾರೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

Advertisement

ಜಮ್ಮು-ಕಾಶ್ಮೀರದ ವಿಚಾರದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ನಿಲುವು ಸರಿಯಾಗಿತ್ತು, ಆದರೆ ನೆಹರು ಅವರ ಧೋರಣೆ ತಪ್ಪಾಗಿತ್ತು. ಇದರಿಂದಾಗಿ ಅದೊಂದು ಐತಿಹಾಸಿಕ ಪ್ರಮಾದಕ್ಕೆ ಕಾರಣವಾಯಿತು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು. ಆಗಸ್ಟ್ 6ರಂದು 370ನೇ ವಿಧಿ ರದ್ದುಗೊಳಿಸುವ ನಿರ್ಣಯಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next