ಕಾಪು: 2018-19ನೇ ಸಾಲಿನ ನೆರೆ ಪರಿಹಾರ ಅನುದಾನಡಿ ಕಾಪು ಪುರಸಭೆ ವ್ಯಾಪ್ತಿಯಲ್ಲಿ ಕೈಗೆತ್ತಿ ಕೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮ ಗಾರಿಗಳ ಗುಣಮಟ್ಟವನ್ನು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಅವರು ಮಂಗಳವಾರ ಪರಿಶೀಲನೆ ನಡೆಸಿದರು.
ಬೇಡಿಕೆಗಳಿಗೆ ಸ್ಪಂದಿಸಿ
ಈ ಸಂದರ್ಭ ಮಾತನಾಡಿದ ಅವರು ಕಾಪು ತಾಲೂಕು ಮತ್ತು ಕಾಪು ಪುರಸಭೆ ಬೆಳೆಯುತ್ತಿರುವ ಪ್ರದೇಶವಾಗಿದ್ದು, ಇಲ್ಲಿನ ಜನರ ಮೂಲ ಆವಶ್ಯಕತೆಗಳತ್ತ ಗಮನ ಹರಿಸಿ, ಅವರ ಬೇಡಿಕೆಗಳಿಗೆ ಸ್ಪಂದಿಸು ವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅಭಿವೃದ್ಧಿಯಲ್ಲಿ ಯಾವುದೇ ರೀತಿಯ ತಾರತಮ್ಯವಿಲ್ಲದಂತೆ ಪುರಸಭೆಯ ಸಮಗ್ರ ಅಭಿವೃದ್ಧಿಗೆ ರೂಪುರೇಷೆ ತಯಾರಿಸಿ, ಮುನ್ನಡೆಯುವುದು ಪುರಸಭೆ ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದರು.
2018-19ನೇ ಸಾಲಿನ ನೆರೆ ಪರಿಹಾರ ಅನುದಾನಡಿ ಕಾಪು ಪುರಸಭಾ ವ್ಯಾಪ್ತಿಯ ಕಾಪು ಲೈಟ್ ಹೌಸ್ ಹತ್ತಿರ ಸುಬ್ಬಯ್ಯ ತೋಟ ಎಸ್.ಸಿ. ಕಾಲನಿ ಬಳಿ ತುರ್ತು ನದಿ ದಂಡೆ ಸಂರಕ್ಷಣಾ ಕಾಮಗಾರಿ ಪರಿಶೀಲನೆ, ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 10ರಲ್ಲಿ ಕಾಪು ಅಂಡರ್‌ಪಾಸ್ ಬಳಿ ಪೇಟೆಯ ಮುಖ್ಯ ಚರಂಡಿ ನಿರ್ಮಾಣ ಕಾಮಗಾರಿ ಪರಿಶೀಲನೆ, ಕೊಂಬಗುಡ್ಡೆ 51 ಬೀಡಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗಳನ್ನು ವೀಕ್ಷಿಸಿದ ಅವರು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಸಹಾಯಕ ಕಮೀಷನರ್ ಡಾ| ಮಧುಕೇಶ್ವರ್, ಕಾಪು ತಹಶೀಲ್ದಾರ್ ಸಂತೋಷ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.