Advertisement

Nejaru case ;ವಿಶೇಷ ಸರಕಾರಿ ಅಭಿಯೋಜಕರ ನೇಮಕ

09:02 PM Jan 24, 2024 | Team Udayavani |

 ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ವಾದಿಸಲು ಮಂಗಳೂರಿನ ಹಿರಿಯ ನ್ಯಾಯವಾದಿ ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

Advertisement

ಈ ಪ್ರಕಣದಲ್ಲಿ ಸಂಬಂಧಪಟ್ಟ ವಿಚಾರಣ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ ಸರಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ಮುಂದಿನ ಆದೇಶದವರೆಗೆ ನಿಯೋಜಿಸಿದ್ದು, ಈ ಪ್ರಕರಣದ ವಿಚಾರಣೆ ದಿನಾಂಕಗಳಂದು ನ್ಯಾಯಾಲಯಗಳಲ್ಲಿ ಹಾಜರಿದ್ದು, ಪ್ರಕರಣವನ್ನು ನಡೆಸುವಂತೆ ಒಳಾಡಳಿತ ಇಲಾಖೆ(ಪೊಲೀಸ್ ಸೇವೆಗಳು-ಬಿ) ಸರಕಾರದ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಅವರು ಆದೇಶ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next