ಉಪ್ಪಿನಂಗಡಿ: ಯುವತಿಯೋರ್ವಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ರವಿವಾರ ರಾತ್ರಿ ನಡೆದಿದೆ.
ನೆಲ್ಯಾಡಿ ನಿವಾಸಿ ವಿ.ಜೆ.ಜೋಸೆಫ್ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆಗೆ ಶರಣಾದ ಯುವತಿ.
ಬಿಬಿಎ ಪದವಿ ಮುಗಿಸಿದ ಬಳಿಕ ಮನೆಯಲ್ಲಿದ್ದ ನವ್ಯಾ ರವಿವಾರ ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಗೆ ತೆರಳಿದ್ದರು. ಬೆಳಿಗ್ಗೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಮನೆಯವರು ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಆಸ್ಪತ್ರೆಯಲ್ಲಿರುವ ಸಚಿವ ಸದಾನಂದ ಗೌಡ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಸಚಿವರು
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.