Advertisement

ನೆಲ್ಯಾಡಿ: ಬೊಲೆರೋ- ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೂವರ ದುರ್ಮರಣ

10:05 AM Jul 03, 2019 | Team Udayavani |
ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬೊಲೆರೋ ವಾಹನ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೊಲೇರೋ ವಾಹನದಲ್ಲಿದ್ದ ಅಬ್ದುಲ್ ಸತ್ತಾರ್ ಮೊರಂಕಾಲ, ಗೋಳಿತೊಟ್ಟಿನ ಸ್ಯಾಮ್ಸನ್ ಹಾಗೂ ಶ್ರೇಯಸ್ ಅಪಘಾತದಲ್ಲಿ ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿರುವ ಜನಾರ್ದನ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement

Udayavani is now on Telegram. Click here to join our channel and stay updated with the latest news.

Next