Advertisement
ಮಾ. 13ರ ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಾ. 8ರ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತದೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವದ ಅನ್ನಛತ್ರವನ್ನು ದೇವಸ್ಥಾನದ ಪ್ರಧಾನ ಅರ್ಚಕ ಬಿ.ಕೆ. ಶ್ರೀನಿವಾಸ ರಾವ್ ಉದ್ಘಾಟಿಸಿದರು. ಕಾರ್ಯಾಲಯವನ್ನು ಕಾವು-ಕೌಕ್ರಾಡಿ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು.
ಪಡುಬೆಟ್ಟು, ಕೊಲ್ಯೊಟ್ಟು, ಪೊಸೊಳಿಗೆ, ಪಟ್ಟೆ, ಸರೋಳಿಕೆರೆ, ತೊಟ್ಲ ಗುಂಡಿ, ಪಲಸತಡ್ಕ, ಪಟ್ಟೆಜಾಲು, ಬಾಕಿಜಾಲು,ಹೊಸವಕ್ಲು, ಅಡೀಲು, ದರ್ಖಾಸು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಹೊರೆಕಾಣಿಕೆ ಹೊತ್ತ ವಾಹನಗಳ ಮೆರವಣಿಗೆ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಇಲ್ಲಿ ದೇವಸ್ಥಾನದ ಅರ್ಚಕ ಸುರೇಶ್ ಮುಂಚ್ಚಿತ್ತಾಯ ಅವರು ಪೂಜೆ ಸಲ್ಲಿಸಿ ದೀಪ ಬೆಳಗಿಸಿ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್, ಸದಸ್ಯ ನಾರಾಯಣ ಹೆಗ್ಡೆ ಪಡ್ಪಗುಡ್ಡೆ ಉಪಸ್ಥಿತರಿದ್ದರು. ಬಳಿಕ ಹೊರೆಕಾಣಿಕೆ ಮೆರವಣಿಗೆಯೂ ನೆಲ್ಯಾಡಿ ಪೇಟೆ ಮೂಲಕ ತೆರಳಿತು. ಪಡುಬೆಟ್ಟು ದೇವಸ್ಥಾನದ ದ್ವಾರದ ಬಳಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಹೊರೆಕಾಣಿಕೆ ಮೆರವಣಿಗೆ ಉದ್ಘಾಟಿಸಿದರು. ಹೊರೆಕಾಣಿಕೆ ಸಮಿತಿ ಸಂಚಾಲಕ ಜಯಾನಂದ ಬಂಟ್ರಿಯಾಲ್ ಅವರ ನೇತೃತ್ವದಲ್ಲಿ ಭಜನೆಯೊಂದಿಗೆ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
Related Articles
Advertisement
ಮಧ್ಯಾಹ್ನ ಕ್ಷೇತ್ರದಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಭಾ ಸಂಯೋಜನೆ ಸಮಿತಿ ಸಂಚಾಲಕ, ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಟಿ., ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮರಾತ್ರಿ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು. ಭಜನ ಕಾರ್ಯಕ್ರಮ
ಅಪರಾಹ್ನ ಭಜನೋತ್ಸವವನ್ನು ನೆಲ್ಯಾಡಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಆನಂದ ಅಜಿಲ ಉದ್ಘಾಟಿಸಿದರು. ಬಳಿಕ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ಭಜನ ಮಂಡಳಿ, ಮಾದೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಭಜನ ಮಂಡಳಿ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಸಂಜೆ ಕ್ಷೇತ್ರದ ತಂತ್ರಿಗಳಿಗೆ ಹಾಗೂ ಇತರ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ರಾತ್ರಿ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹಾವಾಚನ, ಆಚಾರ್ಯಾದಿ ಋತ್ವಿಗ್ವರಣ, ಪ್ರಾಸಾದ ಶುದ್ಧಿ, ಅಂಕುರಾರೋಪಣ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.