Advertisement
ಜತೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಮೂಲಕ ಯೋಜನೆಯನ್ನು ವಿಸ್ತರಿಸುವುದಾಗಿ ಘೋಷಿಸಿದೆ. 2015ರ ಜೂನ್‌ನಲ್ಲಿ ಪ್ರಾರಂಭವಾದ ಈ ಯೋಜನೆ ಎಲ್ಲ ಅರ್ಹ ನಗರ ಫಲಾನುಭವಿಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳನ್ನು ಒದಗಿಸುವ ಗುರಿ ಹೊಂದಿದೆ. ಕಳೆದ ಫೆಬ್ರವರಿಯಲ್ಲಿ ಮಂಡಿಸಿದ್ದ ಮಧ್ಯಂತರ ಬಜೆಟ್‌ನಲ್ಲೂ ಪಿಎಂಎವೈಗೆ 80,671 ಕೋಟಿ ರೂ. ನಿಗದಿಪಡಿಸಲಾಗಿತ್ತು. ಅದಕ್ಕೂ ಹಿಂದಿನ ಬಜೆಟ್‌ಲ್ಲಿ 54,103 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ವಸತಿ ಕೊರತೆ ನೀಗಿಸಲು ಹೆಚ್ಚಿನ ಅನುದಾನ ನೀಡಿರುವುದು ನಗರವಾಸಿಗಳ ಅರ್ಹ ಫಲಾನುಭವಿಗಳಿಗೆ ನೆರವಾಗಲಿದೆ. ಕಳೆದ 10 ವರ್ಷಗಳಲ್ಲಿ 4.21 ಕೋಟಿ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ.
ನಗರವಾಸಿಗಳು ತಮ್ಮ ಕನಸಿನ ಮನೆಗಳನ್ನು ಕಟ್ಟಿಕೊಳ್ಳಲು ಕೈಗೆಟುಕುವ ದರದಲ್ಲಿ ಸಾಲ ನೀಡಲು ಅನುಕೂಲವಾಗುವಂತೆ ಬಡ್ಡಿ ಸಬ್ಸಿಡಿ ನೀಡಲೂ ಕೇಂದ್ರ ಯೋಜಿಸಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.