Advertisement

ನವೆಂಬರ್‌ನಿಂದ ಎನ್‌ಇಪಿ ಜಾರಿ

11:28 PM Aug 25, 2022 | Team Udayavani |

ಬೆಂಗಳೂರು: ಮುಂದಿನ ನವೆಂಬರ್‌ನಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಅಧಿಕೃತವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ರಾಜ್ಯ ಸರಕಾರ ನಿರ್ಧರಿಸಿದೆ.

Advertisement

ಈ ಸಂಬಂಧ ಗುರುವಾರ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್‌ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಶಾಲಾ ಶಿಕ್ಷಣದ ಮೊದಲ ಹಂತವಾದ 3ರಿಂದ 5 ವರ್ಷದ ಮಕ್ಕಳಿಗೆ ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣವನ್ನು (ಇಸಿಸಿಇ) ರಾಷ್ಟ್ರೀಯ ಶಿಕ್ಷಣ ನೀತಿ-2020 ಅಡಿ ಜಾರಿಗೊಳಿಸಲು ಸಿದ್ಧತೆ ನಡೆದಿದೆ. 2022-23ನೇ ಸಾಲಿನಿಂದ ಎನ್‌ಇಪಿ ಜಾರಿಗೊಳಿಸಲು ರಾಜ್ಯದ 20 ಸಾವಿರ ಅಂಗನವಾಡಿಗಳಲ್ಲಿ ತರಬೇತಿ ನೀಡಲಾಗುತ್ತಿದೆ ಎಂದರು.

ಎನ್‌ಇಪಿ ಅನ್ನು ಅನುಷ್ಠಾನ ಮಾಡುತ್ತಿರುವ ಮೊದಲ ರಾಜ್ಯ ನಮ್ಮದು. ಈ ಸಂಬಂಧ 26 ಪೊಸಿಷನ್‌ ಪೇಪರ್‌ ಅನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಬೇರೆ ರಾಜ್ಯಗಳೂ ಸಲ್ಲಿಸಿದ್ದು, ಎಲ್ಲವನ್ನೂ ಪರಿಗಣಿಸಿ ಕೇಂದ್ರ ಸರಕಾರವು ಅಕ್ಟೋಬರ್‌ನಲ್ಲಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಬಿಡುಗಡೆ ಮಾಡಲಿದೆ. ಇದನ್ನು ಆಧರಿಸಿ ಕರ್ನಾಟಕ ಪಠ್ಯಕ್ರಮ ಚೌಕಟ್ಟು (ಕೆಸಿಎಫ್) ರೂಪಿಸಲು 6 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಸದ್ಯ 3 ವರ್ಷದ ಮಕ್ಕಳಿಗೆ ಒದಗಿಸಲಾಗುತ್ತಿರುವ “ಚಿಲಿಪಿಲಿ ಮತ್ತು ಚಿಲಿಪಿಲಿ ಪ್ಲಸ್‌’ ಪಠ್ಯಕ್ರಮ ರಾಷ್ಟ್ರೀಯ ಶಿಕ್ಷಣ ನೀತಿ ಅನುಗುಣವಾಗಿದೆ. ಮತ್ತೂಮ್ಮೆ ನವೆಂಬರ್‌ನಲ್ಲಿ ಮೊದಲ ಹಂತದಲ್ಲಿ 20 ಸಾವಿರ ಅಂಗನವಾಡಿಗಳಲ್ಲಿ ಎನ್‌ಇಪಿ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next