ಸುಬ್ರಹ್ಮಣ್ಯ: ಈ ವರ್ಷದಿಂದಲೇ ಆಯ್ದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿ , ಈ ವರ್ಷ 400- 500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಆರಂಭವಾಗಲಿದೆ ಎಂದರು.
ಎಸೆಸೆಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಮಕರ ಸಂಕ್ರಾಂತಿ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ14ರ ಬದಲು 15ಕ್ಕೆ ರಜೆ ನೀಡಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು. ವರ್ಷದಲ್ಲಿ ಐದು ರಜೆಗಳನ್ನು ನೀಡುವ ಅವಕಾಶ ಜಿಲ್ಲಾಧಿಕಾರಿ ಗಳಿಗೆ ನೀಡಲಾಗಿದೆ. ಅದರಂತೆ ಅವರು ರಜೆ ನೀಡುತ್ತಾರೆ. ರಜೆ ನೀಡುವಲ್ಲಿಯೂ ಕೆಲವೊಂದು ಬದಲಾವಣೆ ಮಾಡಲಾಗಿದೆ ಎಂದರು.
Related Articles
ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಆಗದೇ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಎಂದರು. ಸಚಿವ ಎಸ್. ಅಂಗಾರ ಜತೆಗಿದ್ದರು.