ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಾಗಿ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ತುಳಸಿಮಾಲಾ ಹೇಳಿದರು.
ಮಂಗಳವಾರ ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನೂತನ ಶಿಕ್ಷಣ ನೀತಿ ಜಾರಿಗಾಗಿ ಪದವಿ ತರಗತಿಗಳಿಗೆ ಪಠ್ಯ ರಚಿಸಲು ರಾಜ್ಯ ಮಟ್ಟದ ಸಮಿತಿ ನೇಮಕ ಮಾಡಲಾಗಿದೆ. ವಿವಿಧ ವಿಷಯಗಳ ಬಿಓಎಸ್ ಪುನಾರಚನೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ:ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಸಿ: ಡಾ.ಸುಧಾಕರ್
ರಾಜ್ಯ ಸರ್ಕಾರ ನೂತನ ಶಿಕ್ಷಣ ನೀತಿ ಅನುಷ್ಠಾನಕ್ಕೆ ನಿರ್ಧರಿಸಿದ ಬೆನ್ನಲ್ಲೇ ನಮ್ಮ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ನೀತಿ ಅನುಷ್ಠಾನಕ್ಕೆ ಉಸ್ತುವಾರಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಟಾಸ್ಕ್ ಫೋರ್ಸ್ ಸಮಿತಿಗೆ ಮಾರ್ಗದರ್ಶನ ಮಾಡಲು ವಿಶ್ವವಿದ್ಯಾಲಯದ ಸಿಂಡಿಕೇಟ್, ವಿದ್ಯಾ ವಿಷಯಕ ಪರಿಷತ್, ಸಮಾಜದ ಗಣ್ಯರ ಸಲಹಾ ಸಮಿತಿ ರಚಿಸಲಾಗಿದೆ ಎಂದು ವಿವರಿಸಿದರು.
ವಿಶ್ವವಿದ್ಯಾಲಯದ ಕುಲಸಚಿವೆ ಡಾ.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಡಾ.ಕೆ.ರಮೇಶ, ಡಾ.ವಿಜಯಾ ಕೋರಿಶಟ್ಟಿ. ಡಾ.ಪಿ.ಜಿ.ತಡಸದ, ಡಾ.ಓಂಕಾರ ಕಾಕಡೆ, ಇತರರು ಉಪಸ್ಥಿತರಿದ್ದರು.