ಕಾಠ್ಮಂಡು: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಕಾಠ್ಮಂಡು ಜಿಲ್ಲಾ ನ್ಯಾಯಾಲಯವು ಶುಕ್ರವಾರ ತೀರ್ಪು ಪ್ರಕಟಿಸಿದೆ.
ಒಂದು ವಾರಗಳ ಕಾಲ ನಡೆದ ವಿಚಾರಣೆಯ ನಂತರ ನ್ಯಾಯಾಲಯದ ತೀರ್ಪು ಹೊರಬಿದ್ದಿದ್ದು, ಮುಂದಿನ ಕಲಾಪದಲ್ಲಿ ಶಿಕ್ಷೆಯನ್ನು ಪ್ರಕಟಿಸಲಾಗುವುದು ಎಂದು ಹೇಳಿದೆ.
18 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಲಮಿಚಾನೆ ತಪ್ಪಿತಸ್ಥನೆಂದು ತೀರ್ಪು ನೀಡಿದೆ. ಆರಂಭಿಕ ವರದಿಗಳಿಗೆ ವ್ಯತಿರಿಕ್ತವಾಗಿ, ಆಗಸ್ಟ್ 2022 ರಲ್ಲಿ ನಡೆದ ಘಟನೆಯ ಸಮಯದಲ್ಲಿ ಸಂತ್ರಸ್ಥೆ ಅಪ್ರಾಪ್ತ ವಯಸ್ಕಳಾಗಿರಲಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನ್ಯಾಯಾಲಯವು ಶಿಕ್ಷೆಯನ್ನು ಜನವರಿ 10ರಂದು ಮುಂಬರುವ ವಿಚಾರಣೆಯಲ್ಲಿ ಪ್ರಕಟಿಸುತ್ತದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 2022ರ ಅಕ್ಟೋಬರ್ 6ರಂದು ಸಂದೀಪ್ ಅವರನ್ನು ತ್ರಿಭುವನ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಗಂಭೀರ ಆರೋಪಗಳ ಹೊರತಾಗಿಯೂ, ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯ ಮೂಲಕ ಜನವರಿ 12, 2023 ರಂದು ಲಮಿಚಾನೆ ಜಾಮೀನು ಪಡೆದರು. ಜಂಟಿ ಪೀಠವು ನಿರ್ದಿಷ್ಟ ಷರತ್ತುಗಳೊಂದಿಗೆ ರೂ 2 ಮಿಲಿಯನ್ ಜಾಮೀನು ಬಾಂಡ್‌ನಲ್ಲಿ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತು.