Advertisement

ನೆರಿಯ ಗ್ರಾಮದಲ್ಲಿ ಸ್ಮಶಾನದ  ಕೊರತೆ: ಪಂಚಾಯತ್ ಎದುರು ಮೃತದೇಹ ಇಟ್ಟು ಪ್ರತಿಭಟನೆಗೆ ಸಿದ್ಧತೆ

12:01 PM Jul 15, 2023 | Team Udayavani |

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮೃತ ದೇಹವನ್ನು ಗ್ರಾಮ ಪಂಚಾಯತ್ ಎದುರು ಇಟ್ಟು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.‌

Advertisement

ಕಳೆದ ಹಲವು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವಾರು ಗ್ರಾಮ ಸಭೆಗಳಲ್ಲಿ ಬೇಡಿಕೆ ಇಟ್ಟರೂ ಯಾರು ಕೂಡ ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ನೆರಿಯದಲ್ಲಿ ಪ್ರತಿಭಟನೆ ನಡೆಸುತಿದ್ದಾರೆ.

ಜನತಾ ಕಾಲನಿ ನಿವಾಸಿಯೊಬ್ಬರು ಜು.14 ರಂದು ಮೃತಪಟ್ಟಿದ್ದು, ಅವರ ಮೃತದೇಹವನ್ನು ಪಂಚಾಯತ್ ಎದುರು ಇಟ್ಟು ಪ್ರತಿಭಟನೆಗೆ ಊರವರು ಮುಂದಾಗಿದ್ದಾರೆ.

ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಅವರ ಅಂತ್ಯ ಸಂಸ್ಕಾರವನ್ನು ಗ್ರಾ.ಪಂ. ಎದುರೇ  ಮಾಡುತ್ತೇವೆ ಎಂಬ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

Advertisement

ಮೃತರ ಮನೆಗೆ ಗ್ರಾ.ಪಂ. ಅಧ್ಯಕ್ಷರು, ಅಧಿಕಾರಿಗಳು ಬಂದು ಗ್ರಾಮಸ್ಥರ ಮನವೊಲಿಸಿದರೂ ಇಷ್ಟು ವರ್ಷದ ಬೇಡಿಕೆ ಈಡೇರಿಲ್ಲ. ಸ್ಮಶಾನ ಆಗುವ ತನಕ ಪಂಚಾಯತ್ ಗೆ ಬೀಗ ಹಾಕಿ ಎಂದು ತರಾಟೆಗೆ ತಗೊಂಡಿದ್ದಾರೆ.

ತಹಶೀಲ್ದಾರ್ ಸ್ಥಳಕ್ಕೆ ಬಂದು ನಮಗೆ ಜಾಗ ಇವತ್ತೇ ನಿಗದಿ ಪಡಿಸಬೇಕು. ಒಂದು ವೇಳೆ ಇವತ್ತೂ ಕೂಡ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಪಂಚಾಯತ್ ಎದುರು ಅಂತ್ಯ ಸಂಸ್ಕಾರ ನೆರವೇರಿಸುತ್ತೇವೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next