Advertisement

ನೆರಿಯಾ ಗಂಡಿಬಾಗಿಲು: ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿ ಕೊಲೆ

07:45 AM Jan 08, 2021 | Team Udayavani |

ಬೆಳ್ತಂಗಡಿ: ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ಕುಡಿದ ಮತ್ತಿನಲ್ಲಿ ಪತಿಯಿಂದ ಪತ್ನಿಯ ಹೊಡೆದು ಕೊಲೆಗೈದ ಘಟನೆ ಗುರುವರ ರಾತ್ರಿ‌‌ ನಡೆದಿದೆ.

Advertisement

ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯ ಫ್ರಾನ್ಸಿಸ್ (40) ಕೊಲೆಯಾಗಿದ್ದು, ಈಕೆಯ ಪತಿ ಜಾನ್ ಸನ್ (47) ಕೊಲೆಗೈದ ಆರೋಪಿ.

ಮೂಲತಃ ಕೇರಳದ ಇರುಟ್ಟಿ ನಿವಾಸಿಗಳಾಗಿದ್ದು ಗಂಡಿಬಾಗಿಲು ಸಮೀಪ ಜಮೀನು ಹೊಂದಿದ್ದರು. ಇಬ್ಬರು ರಬ್ಬರ್ ಟ್ಯಾಪಿಂಗ್ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿ ನಿತ್ಯ ಪತಿ -ಪತ್ನಿ ಮಧ್ಯೆ ಗಲಾಟೆ ಸಂಭವಿಸುತ್ತಿದ್ದು, ಗುರುವಾರ ವಿಕೋಪಕ್ಕೆ ತೆರಳಿ ಪತಿ ಜಾನ್ ಸನ್ ಕಟ್ಟಿಗೆಯ ತುಂಡಿನಲ್ಲಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ರಾತ್ರಿ 11 ಗಂಟೆಗೆ ಘಟನೆ ಸಂಭವಿಸಿದ್ದು, ಕುಸಿದು ಬಿದ್ದ ಸೌಮ್ಯ ಅವರನ್ನು ತಕ್ಷಣ ಜಾನ್ ಸನ್ ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ತೆರಳಬೇಕಾದರೆ ಸೌಮ್ಯ ಮೃತಪಟ್ಟಿದ್ದಾರೆ. ಇವರಿಗೆ 10 ವರ್ಷದ ಹೆಣ್ಣು ಮಗುವೊಂದಿದೆ.

ಘಟನೆ ಕುರಿತು ಸೌಮ್ಯ ಅವರ ಸಹೋದರ ಸನೋಜ್ ಫ್ರಾನ್ಸಿಸ್ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ಪತಿ ಜಾನ್ ಸನ್ ನನ್ನು ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ಭೇಟಿ‌ ನೀಡಿ ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next