Advertisement

ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಮತ್ತೂಂದು ಕೋವಿಡ್ ಪಾಸಿಟಿವ್‌ ಪ್ರಕರಣ ದೃಢ!

06:15 PM Jul 23, 2020 | sudhir |

ಈಶ್ವರಮಂಗಲ: ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು ಸಮೀಪದ ಕೋಡಿಯಡ್ಕ ಎಂಬಲ್ಲಿ ವ್ಯಕ್ತಿಯೋರ್ವರಿಗೆ ಕೋವಿಡ್ ಪಾಸಿಟಿವ್‌ ಧೃಡ ಪಟ್ಟಿದ್ದು ಅಧಿಕಾರಿಗಳು ಮನೆಯನ್ನು ಸೀಲ್‌ ಡೌನ್‌ ಮಾಡಿದ್ದಾರೆ. ಮಂಗಳವಾರ ಈಶ್ವರಮಂಗಲ ಮೇನಾಲದಲ್ಲಿ ಕೋವಿಡ್ ಪಾಸಿಟಿವ್‌ ಬಂದ ಎರಡೇ ದಿನದಲ್ಲಿ ಇನ್ನೊಂದು ಪಾಸಿಟಿವ್‌ ಪ್ರಕರಣ ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.

Advertisement

ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು ಕೆಲವು ತಿಂಗಳ ಹಿಂದೆ ಊರಿಗೆ ಮರಳಿ ಮತ್ತೆ ಬೆಂಗಳೂರಿಗೆ ತೆರಳಿ ಇತ್ತೀಚೆಗೆ ಊರಿಗೆ ಬಂದಿದ್ದಾರೆ ಹಾಗೂ ತಾಯಿಯನ್ನು ಡಯಾಲಿಸ್‌ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರೆನ್ನಲಾಗಿದೆ. ಆದರೆ ವ್ಯಕ್ತಿಗೆ ಯಾವಾಗ ಕೋವಿಡ್ ವೈರಸ್‌ ಸಂಪರ್ಕವಾಗಿದೆ ಎನ್ನುವುದು ನಿಗೂಢವಾಗಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತನ ಸಂಪರ್ಕದಲ್ಲಿರುವವರನ್ನು 7 ದಿನ ಕ್ವಾರೆಂಟೈನ್‌ ಮಾಡುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

ಈಶ್ವರಮಂಗಲದಲ್ಲಿ ಸಾಮಾಜಿಕ ಅಂತರದ ಕೊರತೆ!
ಮಹಾಮಾರಿ ಕೋವಿಡ್ ಗ್ರಾಮೀಣ ಪ್ರದೇಶದಲ್ಲಿ ಹರಡಲು ಪ್ರಾರಂಭಿಸಿದ್ದು ಸಾರ್ವಜನಿಕರಲ್ಲಿ ಸ್ವಯಂ ಸುರಕ್ಷತೆ ಬಗ್ಗೆ ಕಾಳಜಿ ಇಲ್ಲದೆ ಇರುವುದು ಕಂಡು ಬರುತ್ತಿದೆ. ಈಶ್ವರಮಂಗಲದ ನ್ಯಾಯ ಬೆಲೆಯಲ್ಲಿ ಅಂಗಡಿಯಲ್ಲಿ ಪಡಿತರ ಪಡೆಯುವಲ್ಲಿ ಸಾಮಾಜಿಕ ಅಂತರದ ಕೊರತೆ ಎದ್ದು ಕಂಡು ಬರುತ್ತಿದ್ದು ಇದನ್ನು ಸರಿಪಡಿಸಲು ಸ್ಥಳೀಯ ಪೊಲೀಸ್‌ ಠಾಣೆಯ ಪೇದೆ ಬರಬೇಕಾಯಿತು ಎನ್ನಲಾಗಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್‌, ಪೊಲೀಸರು, ಕೊವಿಡ್‌ ವಾರಿಯರ್ಸ್ ಗಳ ವಿನಂತಿಗೆ ಸಾರ್ವಜನಿಕರು ಪೂರಕವಾಗಿ ಸ್ಪಂದಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next