Advertisement
ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್ಎನ್ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಸಾರ್ವಜನಿಕರು ಸಮಸ್ಯೆ ಬಗ್ಗೆ ನಿರ್ಲಕ್ಷ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಪೇಕಟ್ಟೆ ಪ್ರಮುಖ, ವಕೀಲ ಮೋಹನಶೆಟ್ಟಿ ಮಾತನಾಡಿ ಸಾಕಷ್ಟು ವರ್ಷಗಳಿಂದ ಮೊಬೈಲ್ ಟವರ್ ಇದ್ದರು ನೆಟ್ ವರ್ಕ್ ಸಮಸ್ಯೆ ಬಾಧಿಸುತ್ತಿದೆ. ವಿದ್ಯುತ್ ಹೋಗುತ್ತಿದ್ದಂತೆ ನೆಟ್ ವರ್ಕ್ ಸಮಸ್ಯೆ ಎದುರಾಗುತ್ತಿದೆ. ಜನರೇಟರ್ ಕೆಟ್ಟು ಹೋಗಿದ್ದರು ದುರಸ್ಥಿ ಇಲ್ಲ ಅಧಿಕಾರಿಗಳಿಗೆ ಮನವಿ ಮಾಡಿದರೆ ಯಾವುದೇ ಉಪಯೋಗವಿಲ್ಲ. ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲಾಗಿದೆ. ಆದರೆ ಅವರು ಟವರ್ ಹತ್ತಿರ ಬರೋದೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ದೌಡು:
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಬಿಎಸ್ಎನ್ಎಲ್ ಜೆಟಿಒ ಹರೀಶ್, ಸಂತೋಷ್, ಶರತ್, ನಗರ ಠಾಣೆ ಪಿಎಸ್ಐ ರಮೇಶ್ ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದರು. ಈ ವೇಳೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆರೋಪಗಳ ಸುರಿಮಳೆಗೈದರು. ಕೆಲಹೊತ್ತು ಮಾತಿನ ಚಕಮಕಿ ಕೂಡ ನಡೆಯಿತು. ಮದ್ಯಪ್ರವೇಶಿಸಿದ ಪಿಎಸ್ಐ ರಮೇಶ್ ಗ್ರಾಮಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೊಬೈಲ್ ನೆಟ್ ವರ್ಕ್ 24 ಗಂಟೆಯೂ ಸಿಗಬೇಕು. ವಿದ್ಯುತ್ ಇಲ್ಲದಿದ್ದರು ಜನರೇಟರ್ ಮೂಲಕ ನೆಟ್ ವರ್ಕ್ ಇರುವಂತೆ ಕ್ರಮ ಕೈಗೊಳ್ಳಲು ಪಟ್ಟು ಹಿಡಿದರು. ಇದಕ್ಕೆ ಅಧಿಕಾರಿಗಳು 6 ದಿನದ ಕಾಲಾವಕಾಶ ಕೋರಿದರು. ಇದಕ್ಕೆ ಸಮ್ಮತಿಸಿದ ಗ್ರಾಮಸ್ಥರು ಒಂದು ವೇಳೆ ಮಾತು ತಪ್ಪಿದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
Related Articles
Advertisement
ಅರಮನೆಕೊಪ್ಪ ಗೋಪಾಲ್, ಕೊಡಸೆ ಚಂದ್ರಪ್ಪ, ಅಪ್ಪುಭಟ್, ಹಿಲ್ಕುಂಜಿ ಕುಮಾರ್, ಕಿಶೋರ್, ಸುಕೇಶ್ ಮತ್ತಿಕೈ, ಟಿ.ಡಿ ಗಣಪತಿ, ತರುವೆ ಕೃಷ್ಣ, ಸ್ವಾಮಿ ಅಡಗೋಡಿ, ರವೀಂದ್ರ ಮತ್ತಿಮನೆ, ಪ್ರಶಾಂತ ಸಂಪೇಕಟ್ಟೆ, ವೆಂಕಟರಮಣ ಭಟ್, ಶ್ರೀನಿವಾಸ ಎಸ್, ಆಧಿತ್ಯ, ಇತರರು ಇದ್ದರು.
ಇದನ್ನೂ ಓದಿ: Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !