ಪಾಟ್ನಾ: 2024ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ 50ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಲಾರದು ಎಂದು ಈ ಮೊದಲು ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದೀಗ ಉಲ್ಟಾ ಹೊಡೆದಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 6,809 ಕೋವಿಡ್ 19 ಸೋಂಕು ಪ್ರಕರಣ ಪತ್ತೆ, 16 ಮಂದಿ ಸಾವು
ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ನಡುವಿನ ವಾಕ್ಸಮರ ಮುಂದುವರಿದಿದ್ದು, ಭಾನುವಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ವೇಳೆ ನಿತೀಶ್ ಕುಮಾರ್ ಈ ಕುರಿತು (ಸೆ.04) ಪ್ರತಿಕ್ರಿಯೆ ನೀಡಿದ್ದರು.
“ ನಾನು ಯಾವತ್ತೂ ಯಾವುದೇ ಅಂಕಿಅಂಶದ ಬಗ್ಗೆ ಮಾತನಾಡಿಲ್ಲ. ನಾನು ವಿಪಕ್ಷಗಳ ಒಗ್ಗಟ್ಟಿನ ಕುರಿತು ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವುದಾಗಿ” ನಿತೀಶ್ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ವೇಳೆ ಬಿಜೆಪಿ 50ಕ್ಕಿಂತ ಹೆಚ್ಚು ಸ್ಥಾನ ಪಡೆಯುವುದಿಲ್ಲ ಎಂದು ಹೇಳಕೆ ನೀಡಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
ದೇಶದಲ್ಲಿರುವ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂಬುದು ನನ್ನ ಉದ್ದೇಶವಾಗಿದೆ. ಆಗ ಮಾತ್ರ ನಮಗೆ ಯಶಸ್ಸು ಸಿಗಲು ಸಾಧ್ಯ. ಆದರೆ ನಾನು ಯಾವತ್ತೂ ಇಂತಹ ಸಂಖ್ಯೆಯ ಕುರಿತು ಹೇಳಿಕೆ ನೀಡಿಲ್ಲ ಎಂದರು.