Advertisement

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

09:51 AM Sep 21, 2024 | Team Udayavani |

ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ವಿವಾದದ ನಡುವೆಯೇ ಅಮುಲ್ ಶುಕ್ರವಾರ (ಸೆ.20) ಸ್ಪಷ್ಟನೆಯನ್ನು ನೀಡಿದೆ.

Advertisement

ಈ ಕುರಿತು ಸ್ಪಷ್ಟನೆ ನೀಡಿದ ಅಮೂಲ್ ನಾವು ತಿರುಪತಿ ದೇವಸ್ಥಾನಕ್ಕೆ ಎಂದಿಗೂ ತುಪ್ಪವನ್ನು ಸರಬರಾಜು ಮಾಡಿಲ್ಲ. ನಮ್ಮ ಸಂಸ್ಥೆಯಿಂದ ತಿರುಪತಿ ದೇವಸ್ಥಾನಕ್ಕೆ ತುಪ್ಪ (ಅಮುಲ್ ತುಪ್ಪ) ಸರಬರಾಜು ಮಾಡಲಾಗಿದೆ ಎಂದು ಹೇಳಲಾದ ತಪ್ಪು ವರದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿವೆ ಎಂದು ಅಮುಲ್ ಇಂಡಿಯಾ ಶುಕ್ರವಾರ ಹೇಳಿದೆ. ಈ ಎಲ್ಲಾ ವರದಿಗಳು ವದಂತಿಗಳಷ್ಟೇ ಎಂದು ಕಂಪನಿ ಹೇಳಿಕೊಂಡಿದೆ.

ಅಮುಲ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿದ್ದು ‘ತಿರುಪತಿ ದೇವಸ್ಥಾನಕ್ಕೆ ತಾನು ಎಂದಿಗೂ ತುಪ್ಪವನ್ನು ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳು ಸಂಪೂರ್ಣ ತಪ್ಪು ಎಂದು ಅಮುಲ್ ಹೇಳಿದೆ. ಅಮುಲ್, “ನಮ್ಮ ತುಪ್ಪವನ್ನು ಅತ್ಯಾಧುನಿಕ ಮತ್ತು ISO ಪ್ರಮಾಣೀಕೃತ ಸ್ಥಾವರಗಳಲ್ಲಿ ತಯಾರಿಸಲಾಗುತ್ತದೆ. ಇದು ಶುದ್ಧ ಹಾಲಿನ ಕೊಬ್ಬಿನಿಂದ ತಯಾರಿಸಲ್ಪಟ್ಟಿದೆ, ಇದನ್ನು ಗುಣಮಟ್ಟದ ಪರೀಕ್ಷೆಯ ನಂತರ ಮಾತ್ರ ಬಳಸಲಾಗುತ್ತದೆ. ನಮ್ಮ ಎಲ್ಲಾ ಉತ್ಪನ್ನಗಳನ್ನು FSSAI ಮಾನದಂಡಗಳ ಪ್ರಕಾರ ತಯಾರಿಸಲಾಗುತ್ತದೆ ಇದರಲ್ಲಿ ಯಾವುದೇ ರೀತಿಯ ಕಲಬೆರಕೆಗೆ ಅವಕಾಶವಿಲ್ಲ.” ಎಂದು ಸ್ಪಷ್ಟಪಡಿಸಿದೆ.

 

Advertisement

ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನಂತಹ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ ಬಳಿಕ ಇಡೀ ಸಮಸ್ಯೆ ಉದ್ಭವವಾಗಿದೆ. ಈ ಹೇಳಿಕೆಯ ನಂತರ ತಿರುಪತಿ ದೇವಸ್ಥಾನದಲ್ಲಿ ಅಮುಲ್ ತುಪ್ಪವನ್ನು ಬಳಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೇಗವಾಗಿ ಹರಡಲು ಪ್ರಾರಂಭಿಸಿತು. ಆದರೆ, ಅಮುಲ್ ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು, ದೇವಸ್ಥಾನಕ್ಕೆ ಎಂದಿಗೂ ತುಪ್ಪವನ್ನು ಪೂರೈಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Advertisement

Udayavani is now on Telegram. Click here to join our channel and stay updated with the latest news.

Next