Advertisement

ಹೊಸ 12 ಪ್ರಕರಣ: ರಾಜ್ಯದಲ್ಲಿ ಒಟ್ಟು 371 ಕೋವಿಡ್ ಸೋಂಕು ಪ್ರಕರಣಗಳು

09:15 AM Apr 19, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು ಮತ್ತೆ 12 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 371ಕ್ಕೇರಿದೆ.

Advertisement

ಮೈಸೂರಿನಲ್ಲಿ ಮೂರು ಪ್ರಕರಣ, ಕಲಬುರಗಿ, ಬಾಗಲಕೋಟೆಯಲ್ಲಿ ತಲಾ ಎರಡು ಪ್ರಕರಣಗಳು ದೃಢವಾಗಿದೆ. ವಿಜಯಪುರ, ಗದಗ, ಧಾರವಾಡ, ಬೆಳಗಾವಿ ಮತ್ತು ಮಂಡ್ಯದಲ್ಲಿ ತಲಾ ಒಂದು ಸೋಂಕು ಪ್ರಕರಣಗಳು ದೃಢವಾಗಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು 13 ಪ್ರಕರಣಗಳು ಮರಣ ಹೊಂದಿದ್ದರೆ, 92 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next