Advertisement

ಉಡುಪಿ: 136 ಜನರಿಗೆ ಸೋಂಕು ದೃಢ, 4492 ಕ್ಕೆ ಏರಿದ ಒಟ್ಟು ಸೋಂಕಿತರ ಸಂಖ್ಯೆ

06:12 PM Aug 01, 2020 | keerthan |

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಪ್ರತಿದಿನವೂ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 136 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ.

Advertisement

ಜಿಲ್ಲೆಯ ಇಂದಿನ 136 ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4492ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿಂದು 852 ಸ್ವಾಬ್ ಟೆಸ್ಟ್ ಫಲಿತಾಂಶ ಬಂದಿದ್ದು, ಅದರಲ್ಲಿ 716 ಜನರ ಟೆಸ್ಟ್ ಫಲಿತಾಂಶ ನೆಗೆಟಿವ್ ಬಂದಿದೆ. ಉಳಿದ 136 ಪಾಸಿಟಿವ್ ಆಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 32,401 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಅದರಲ್ಲಿ 27,463 ಮಾದರಿ ಪರೀಕ್ಷಾ ಫಲಿತಾಂಶ ನೆಗೆಟಿವ್ ಆಗಿದೆ. 4492 ವರದಿಗಳು ಪಾಸಿಟವ್ ಆಗಿದ್ದು, ಇನ್ನೂ 446 ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಬಾಕಿಯಿದೆ.

Advertisement

Udayavani is now on Telegram. Click here to join our channel and stay updated with the latest news.

Next