Advertisement

ರಾಜ್ಯದಲ್ಲಿ ಹೊಸ 16 ಪ್ರಕರಣ ಪತ್ತೆ: 144 ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ

09:03 AM Apr 05, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 16 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆಯಾಗಿದೆ.

Advertisement

ರಾಜ್ಯದ ಕೋವಿಡ್ -19 ಮಾಹಿತಿ ವಕ್ತಾರ ಸಚಿವ ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು ರಾಜ್ಯದ ಸೋಂಕಿತರ ಸಂಖ್ಯೆ 144ಕ್ಕೇರಿದೆ ಎಂದರು.

ಇಂದು ರಾಜ್ಯದಲ್ಲಿ 16 ಹೊಸ ಪ್ರಕರಣಗಳು ಪತ್ತೆಯಾಗಿದೆ.

ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡದ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ ಉಡುಪಿ ಜಿಲ್ಲೆಯ 63 ವರ್ಷದ ಮಹಿಳೆಗೆ ಸೋಂಕು ಪತ್ತೆಯಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕತ್ಸೆ ನೀಡಲಾಗುತ್ತಿದೆ.

Advertisement

ಬೆಂಗಳೂರು ನಗರ ಜಿಲ್ಲೆಯಲ್ಲಿ 55 ಸೋಂಕಿತರು, ಮೈಸೂರಿನಲ್ಲಿ 28 ಪ್ರಕರಣ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಸೋಂಕಿತ ಪ್ರಕರಣಗಳಿವೆ ಎಂದರು.

ರಾಜ್ಯದಲ್ಲಿ ಒಟ್ಟು 32,649 ಜನರು ನಿಗಾದಲ್ಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next