Advertisement

Namma clinic: ಸಾರ್ವಜನಿಕ ಸ್ಥಳದಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ ಪ್ರಾರಂಭ; ದಿನೇಶ್‌

09:59 PM Jun 13, 2024 | Team Udayavani |

ಬೆಂಗಳೂರು: ಬಸ್‌ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸದಾಗಿ 254 “ನಮ್ಮ ಕ್ಲಿನಿಕ್‌’ ಪ್ರಾರಂಭಿಸಲು ಅಗತ್ಯವಿರುವ ಸ್ಥಳ ಗುರುತಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

Advertisement

ಗುರುವಾರ ಇಲಾಖೆಯ ಅಧಿಕಾರಿಗಳೊಂದಿಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಪ್ರಸ್ತುತ ರಾಜ್ಯದಲ್ಲಿ ಕಾರ್ಯಚರಿಸುತ್ತಿರುವ 503 “ನಮ್ಮ ಕ್ಲಿನಿಕ್‌’ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳನ್ನು ಗುರುತಿಸುವಾಗ ವಿಶೇಷವಾಗಿ ಜೈಲು, ಬಸ್‌ ನಿಲ್ದಾಣಗಳಿಗೆ ಆದ್ಯತೆ ನೀಡಬೇಕು. ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ, ಕ್ಯಾಬಿನೆಟ್‌ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಇಲಾಖೆ ಪ್ರ.ಕಾರ್ಯದರ್ಶಿ ಅನಿಲ್‌ ಕುಮಾರ್‌, ಆಯುಕ್ತ ರಂದೀಪ್‌, ರಾಷ್ಟ್ರೀಯ ಆರೋಗ್ಯ ಅಭಿಯಾನದ ಎಂಡಿ ಡಾ.ವೈ.ನವೀನ್‌ ಭಟ್‌ಅವರಿಗೆ ಕಾರ್ಯ ಪ್ರವೃತ್ತರಾಗುವಂತೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next