Advertisement
ಮಂಗಳವಾರ ಒಟ್ಟಾರೆಯಾಗಿ 322 ಹೊಸ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕು ಸಂಬಂಧಿತ ಕಾರಣಗಳಿಂದ 8 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮಂಗಳೂರಿನ ಮನೆ ಮನೆಗೆ ಮೀನು ಮಾರುವ ವ್ಯಾಪಾರಿಗೆ ಕೋವಿಡ್ -19 ಸೋಂಕು ದೃಢ
ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ ಇಂದು 274 ಜನ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ 6004 ಕೋವಿಡ್ 19 ಸೋಂಕಿತರು ಗುಣಮುಖರಾದಂತಾಗಿದೆ.
Related Articles
Advertisement
ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಇಂದು ನಾಲ್ಕು ಪಾಸಿಟಿವ್ ಪ್ರಕರಣ ದೃಢ
ಇಂದು ರಾಜ್ಯದಲ್ಲಿ ಪತ್ತೆಯಾದ ಹೊಸ ಸೋಂಕಿನ ಪ್ರಕರಣಗಳಲ್ಲಿ 05 ಜನ ಸೋಂಕಿತರು ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನಲೆಯುಳ್ಳವರಾಗಿದ್ದಾರೆ ಹಾಗೂ 64 ಜನ ಅಂತರ್ ರಾಜ್ಯ ಪ್ರಯಾಣದ ಹಿನ್ನಲೆಯವರಾಗಿದ್ದಾರೆ ಎಂಬ ಮಾಹಿತಿಯನ್ನು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟನೆಯಲ್ಲಿ ತಿಳಿಸಿದೆ.
ಇದುವರೆಗೆ ಕೋವಿಡ್ ಸಂಬಂಧಿತ ಅತೀ ಹೆಚ್ಚು ಸಾವು ಸಂಭವಿಸಿರುವ ಜಿಲ್ಲೆಯು ಬೆಂಗಳೂರು ನಗರವಾಗಿದೆ. ಇಲ್ಲಿ ಕೋವಿಡ್ ಸೋಂಕಿಗೆ ಈಗಾಗಲೇ 73 ಜನರು ಬಲಿಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಬೀದರ್ (15), ಕಲಬುರಗಿ (11), ದಾವಣಗೆರೆ (07) ಹಾಗೂ ವಿಜಯಪುರ (07) ಜಿಲ್ಲೆಗಳಿವೆ.