Advertisement

ಉಡುಪಿ ಜಿಲ್ಲೆಯಲ್ಲಿಂದು 34 ವರದಿ ಪಾಸಿಟಿವ್, 673 ವರದಿ ನೆಗೆಟಿವ್

06:50 PM Jul 10, 2020 | keerthan |

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಶುಕ್ರವಾರ 34 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ 1477ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ ಇಂದು 707 ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 673 ಜನರ ವರದಿ ನೆಗಟಿವ್ ಬಂದಿದೆ. ಉಳಿದ 34 ಜನರ ಗಂಟಲು ದ್ರವ ಮಾದರಿ ಪಾಸಿಟಿವ್ ವರದಿಯಾಗಿದೆ.

ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1477ಕ್ಕೆ ಏರಿಕೆಯಾಗಿದೆ. ಇದರಲ್ಲಿ 1224 ಜನರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಸಾವನ್ನಪ್ಪಿದ್ದು, 250 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ 21,409 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 17508 ಜನರ ವರದಿ ನೆಗೆಟಿವ್ ಆಗಿದ್ದು, 1477 ಪಾಸಿಟಿವ್ ವರದಿಯಾಗಿದೆ. ಇನ್ನೂ 2424 ವರದಿಗಳ ವರದಿ ಬಾಕಿಯಿದೆ.

Advertisement

Udayavani is now on Telegram. Click here to join our channel and stay updated with the latest news.

Next