ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 64,553 ಹೊಸ ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದರಿಂದ ದೇಶದ ಒಟ್ಟು ಸೋಂಕಿತರ ಸಂಖ್ಯೆ 24 ಲಕ್ಷ ಮೀರಿದೆ.
ಗುರುವಾರ ದೇಶದಲ್ಲಿ 1007 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 48,040ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 6,61,595 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 17,51,556 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಗುರುವಾರ 8,48,728 ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 64,553 ಪಾಸಿಟಿವ್ ವರದಿಯಾಗಿದೆ.
ಕರ್ನಾಟಕ ರಾಜ್ಯದಲ್ಲಿ ಗುರುವಾರ 6706 ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದುವರೆಗೆ 203200 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 78337 ಸಕ್ರಿಯ ಪ್ರಕರಣಗಳಿವೆ.