Advertisement

ಜೂನ್ 6 ರಿಂದ ಹೊಸ ಶೈಕ್ಷಣಿಕ ವರ್ಷ: ಗೋವಾದಲ್ಲಿ ಕೋವಿಡ್ ಆತಂಕ

07:29 PM Jun 05, 2022 | Team Udayavani |

ಪಣಜಿ : ಗೋವಾ ರಾಜ್ಯದಲ್ಲಿ ಸದ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆಯ ಆತಂಕ ಸೃಷ್ಟಿಯಾಗಿದ್ದು, ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವು ಸದ್ಯ ವಿದ್ಯಾರ್ಥಿಗಳಲ್ಲಿ ಮತ್ತು ಪಾಲಕರಲ್ಲಿ ಆತಂಕ ಮೂಡಿಸಿದೆ.

Advertisement

ಜೂನ್ 6 ರಿಂದ ಗೋವಾದಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳಲಿದ್ದು, ಶಾಲಾ ತರಗತಿಗಳು ಆರಂಭಗೊಳ್ಳಲಿದೆ. ಆದರೆ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಕಂಡುಬರುತ್ತಿದ್ದು, ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.

ಕೋವಿಡ್ ಮೂರು ಅಲೆಗಳು ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಮೇಲೂ ಭಾರಿ ಹೊಡೆತ ನೀಡಿದೆ. ಆನ್‍ಲೈನ್ ತರಗತಿಗಳು ಆಫ್‍ಲೈನ್ ತರಗತಿಗಳಾಗಿ ಮಾರ್ಪಡುವಂತಾಗಿ ರಾಜ್ಯದಲ್ಲಿ ಶಾಲೆಗಳು ಆರಂಭಗೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ಸದ್ಯ ಕೋವಿಡ್ ಪ್ರಕರಣಗಳ ಸಂಖ್ಯೆ 50 ಕ್ಕೆ ತಲುಪಿದೆ. ಇನ್ನು ಹದಿನೈದು ದಿನಗಳ ವರೆಗೆ ಕೋವಿಡ್ ಸ್ಥಿತಿಗತಿಗಳ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು

ಕೋವಿಡ್ ನಿಯಂತ್ರಣಕ್ಕಾಗಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಮತ್ತು ಬೂಸ್ಟರ್ ಡೋಸ್‍ಗೆ ಅರ್ಹರಾಗಿರುವ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ರಾಜ್ಯ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮನವಿ ಮಾಡಿದ್ದಾರೆ.

Advertisement

ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಂಡ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತವಾಗಿ ಲಭಿಸುತ್ತಿದ್ದು ಇದಕ್ಕಾಗಿ ನಾನು ಮೊದಲು ಪ್ರಧಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಜನತೆ ಎಲ್ಲರೂ ಕೂಡ ತಮ್ಮ ತಮ್ಮ ಆರೋಗ್ಯದ ಕಾಳಜಿಯನ್ನು ತೆಗೆದುಕೊಳ್ಳಬೇಕು. ಎಲ್ಲವನ್ನೂ ಸರ್ಕಾರವೇ ಹೇಳಬೇಕೆಂದಿಲ್ಲ ಎಂದರು.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿದೆ. ಕೇಂದ್ರ ಸರ್ಕಾರದ ಕೋವಿಡ್ ಮಾರ್ಗ ಸೂಚಿ ಜಾರಿಗೊಂಡ ನಂತರ ನಾವು ರಾಜ್ಯದಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸುತ್ತೇವೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next