Advertisement

ಎಲ್ಲೂರು : ಬೆಳಪು ವ್ಯ. ಸ. ಸಂಘದ ನೂತನ ಹವಾನಿಯಂತ್ರಿತ ಶಾಖೆ ಉದ್ಘಾಟನೆ

11:01 AM Jun 02, 2019 | sudhir |

ಕಾಪು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಬೆಳಪು ವ್ಯವಸಾಯ ಸಹಕಾರಿ ಸಂಘ ಪಣಿಯೂರು ಇದರ ನೂತನ ಹವಾನಿಯಂತ್ರಿತ ಎಲ್ಲೂರು ಶಾಖೆಯ ಉದ್ಘಾಟನಾ ಸಮಾರಂಭವು ಮೇ 31ರಂದು ಎಲ್ಲೂರಿನಲ್ಲಿ ನಡೆಯಿತು.

Advertisement

ಎಲ್ಲೂರು ಶಾಖೆಯ ನೂತನ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್‌ ರಾಜೇಂದ್ರ ಕುಮಾರ್‌, ನೂತನ ಶಾಖಾ ಕಚೇರಿಯನ್ನು ಕರ್ನಾಟಕ ದಾರ್ಮಿಕ ಪರಿಷತ್‌ನ ಆಗಮ ಪಂಡಿತ ವೇ| ಮೂ| ಕೇಂಜ ಶ್ರೀಧರ ತಂತ್ರಿ, ಭದ್ರತಾ ಕೊಠಡಿಯನ್ನು ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಗಣಕೀಕೃತ ವ್ಯವಸ್ಥೆಯನ್ನು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮತ್ತು ಪಡಿತರ ವಿತರಣಾ ವ್ಯವಸ್ಥೆಯನ್ನು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಉದ್ಘಾಟಿಸಿದರು.

ಅದಾನಿ – ಯುಪಿಸಿಎಲ್ ಅಧ್ಯಕ್ಷ ಕಿಶೋರ್‌ ಆಳ್ವ, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌, ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೈ. ಪ್ರಫುಲ್ಲ ಶೆಟ್ಟಿ, ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಧ್ಯಕ್ಷ ನಡಿಮನೆ ದೇವರಾಜ ರಾವ್‌, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್‌ ಬಿ. ನಾಯಕ್‌, ಪಡುಬಿದ್ರಿ ಸಿ.ಎ. ಬ್ಯಾಂಕ್‌ನ ಉಪಾಧ್ಯಕ್ಷ ಗುರುರಾಜ ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಸದಾಶಿವ ಉಳ್ಳಾಲ, ಶಶಿಕುಮಾರ್‌ ರೈ, ಅಶೋಕ್‌ ಕುಮಾರ್‌ ಶೆಟ್ಟಿ, ರಾಜೇಶ್‌ ರಾವ್‌ ಪಾಂಗಾಳ, ಉಡುಪಿ ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಕಾರ್ಯನಿರ್ವಹಣಾಧಿಕಾರಿಗಳು ಭಾಗ ವಹಿಸಿದ್ದರು.

ಬೆಳಪು ಸಿ.ಎ. ಬ್ಯಾಂಕ್‌ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ, ಉಪಾಧ್ಯಕ್ಷ ಶ್ರೀವತ್ಸ ರಾವ್‌, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಲೋಚನಾ ದೇವಾಡಿಗ, ನಿರ್ದೇಶಕರಾದ ಮೋಹನ್‌ ರಾವ್‌ ಹತ್ವಾರಿ, ಗೋಪಾಲ ಪೂಜಾರಿ, ಎಸ್‌. ರಾಮ ಬಂಗೇರ, ನಿರಂಜನ್‌ ಶೆಟ್ಟಿ, ಪಾಂಡು ಶೇರಿಗಾರ್‌, ಆಲಿಯಬ್ಬ ಬ್ಯಾರಿ, ಮೀನ ಪೂಜಾರ್ತಿ, ವೇದಾವತಿ ಕುಂದರ್‌, ಅನಿತಾ, ಬಾಲಕೃಷ್ಣ ಭಟ್ ಸಹಿತ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next