Advertisement

Ayodhya ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ’ ಹೆಸರಿಡಲು ನಿರ್ಧಾರ

08:32 AM Dec 29, 2023 | Team Udayavani |

ಅಯೋಧ್ಯಾ: ಡಿಸೆಂಬರ್ 30 ರಂದು ಉದ್ಘಾಟನೆಗೊಳ್ಳಲಿರುವ ಅಯೋಧ್ಯೆಯ ವಿಮಾನ ನಿಲ್ದಾಣವನ್ನು ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾಧಾಮ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

ರಾಮಾಯಣ ಮಹಾಕಾವ್ಯದ ಕರ್ತೃ ಎಂದು ಕೊಂಡಾಡುವ ಪೌರಾಣಿಕ ಕವಿ ವಾಲ್ಮೀಕಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಈ ವಿಮಾನ ನಿಲ್ದಾಣವನ್ನು ಮೊದಲು ‘ಮರ್ಯಾದಾ ಪುರಷೋತ್ತಮ್ ಶ್ರೀ ರಾಮ್ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಕರೆಯಲಾಗುತ್ತಿತ್ತು.

ನಾಳೆ (ಶನಿವಾರ) ಡಿಸೆಂಬರ್ 30 ರಂದು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಮಹಾಮಸ್ತಕಾಭಿಷೇಕ ಸಮಾರಂಭವು ಜನವರಿ 22, 2024 ರಂದು ನಡೆಯಲಿದೆ.

ಉದ್ಘಾಟನೆಯ ದಿನದಂದು ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಮೊದಲ ವಿಮಾನಗಳು ಕಾರ್ಯನಿರ್ವಹಿಸಲಿವೆ ಎನ್ನಲಾಗಿದ್ದು. ಎರಡು ವಿಮಾನಯಾನ ಸಂಸ್ಥೆಗಳು ಈಗಾಗಲೇ ದೆಹಲಿ, ಮುಂಬೈ ಮತ್ತು ಅಹಮದಾಬಾದ್‌ನಿಂದ ಅಯೋಧ್ಯೆಗೆ ವಿಮಾನ ಹಾರಾಟ ನಡೆಸಲಿದೆ ಎನ್ನಲಾಗಿದೆ.

Advertisement

ವಿಮಾನ ನಿಲ್ದಾಣದ ಮೊದಲ ಹಂತದ ನಿರ್ಮಾಣಕ್ಕೆ ಸುಮಾರು 1,450 ಕೋಟಿ ರೂ. ವೆಚ್ಚವಾಗಿದ್ದು, ಸುಮಾರು 6,500 ಚದರ ಮೀಟರ್‌ಗಳಷ್ಟು ವಿಸ್ತಾರವಾಗಿರುವ ಹೊಸ ಟರ್ಮಿನಲ್ ಕಟ್ಟಡವು 600 ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ವಿನ್ಯಾಸಗೊಳಿಸಲಾಗಿದ್ದು, ವಾರ್ಷಿಕ 10 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ ಎನ್ನಲಾಗಿದೆ.

ಇದನ್ನೂ ಓದಿ: Daily Horoscope: ಪ್ರಾರಂಭದಲ್ಲಿದ್ದ ಧೈರ್ಯ ಕೊಂಚ ಕ್ಷೀಣಿಸಿದರೂ ಕಾರ್ಯದಲ್ಲಿ ಹಿಂದಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next