Advertisement

Breaking News! ಚಾಮರಾಜನಗರ: ಹೆಣ್ಣು ಮಗುವಿಗೆ ಜನ್ಮ ನೀಡಿದ ಕೋವಿಡ್ ಸೋಂಕಿತ ಮಹಿಳೆ!

07:28 PM Jul 19, 2020 | sudhir |

ಚಾಮರಾಜನಗರ: ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಇಂದು ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಕ್ಷೇಮವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement

ಹನೂರು ತಾಲೂಕಿನ ಗಾಣಿಗ ಮಂಗಲದ 21 ವರ್ಷದ ಮಹಿಳೆ (ರಾಜ್ಯ ಸಂಖ್ಯೆ ಪಿ 64279, ಜಿಲ್ಲಾ ಸಂಖ್ಯೆ ಸಿಎಚ್‌ಎನ್-266) ಹೆಣ್ಣು ಮಗುವಿಗೆ ಜನ್ಮವಿತ್ತವರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಮಹಿಳೆ ಜನ್ಮ ನೀಡಿದ ಮೊದಲ ಪ್ರಕರಣ ಇದಾಗಿದೆ.

ಈ ಮಹಿಳೆ ಎರಡು ದಿನಗಳ ಹಿಂದೆಯೇ ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಬಂದ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿತ್ತು. ದಿನ ತುಂಬಿದ್ದರಿಂದ ಆಕೆಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲು ಆಸ್ಪತ್ರೆ ವೈದ್ಯರು ನಿರ್ಧರಿಸಿದರು.

ಇಂದು (ಭಾನುವಾರ) ಸಂಜೆ 6 ಗಂಟೆ ಸಮಯದಲ್ಲಿ ನಗರದ ಕೋವಿಡ್ ಆಸ್ಪತ್ರೆಯ ಕೆಳಗಿರುವ ಹಳೆಯ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಮಹಿಳೆಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಹೆಣ್ಣು ಮಗು ಜನಿಸಿದ್ದು, ಆರೋಗ್ಯವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪ್ರಸೂತಿ ತಜ್ಞೆ ಡಾ. ಸ್ವಾತಿ, ಅರವಳಿಕೆ ತಜ್ಞ ಡಾ. ಸಮರ್ಥ್, ಮಕ್ಕಳ ತಜ್ಞೆ ಡಾ. ಲಕ್ಷ್ಮೀ ಹಾಗೂ ಸ್ಟಾಫ್ ನರ್ಸ್ ಪುಟ್ಟ ಲಿಂಗಮ್ಮ ಈ ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದರು.

ಮಹಿಳೆ ದಾಖಲಾಗಿದ್ದ ಹೆರಿಗೆ ವಾರ್ಡ್ ಅನ್ನು ಸೀಲ್‌ಡೌನ್ ಮಾಡಲಾಗಿದೆ. ಅಲ್ಲಿ ದಾಖಲಾಗಿದ್ದ ಇನ್ನಿತರ ರೋಗಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next