Advertisement

ಸರ್ಕಾರಿ ಶಾಲೆಗಳಿಗೆ ಹೊಸ ಕಟ್ಟಡ

04:23 PM Aug 06, 2019 | Team Udayavani |

ಬಂಗಾರಪೇಟೆ: ತಾಲೂಕಿನ ಶಿಥಿಲ ಹಾಗೂ ಹಳೇ ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ಕೆಡವಿ ಹೊಸದಾಗಿ ನಿರ್ಮಿಸಿ, ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

Advertisement

ತಾಲೂಕಿನ ಕಾಮಸಮುದ್ರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ 13.25 ಲಕ್ಷ ರೂ. ನಲ್ಲಿ ನಿರ್ಮಿಸಿರುವ ನೂತನ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿರುವ ಗ್ರಾಮೀಣ ಜನರಿಗೆ ಸರ್ಕಾರಿ ಶಾಲೆಗಳು ಅವಶ್ಯಕತೆ ಇದೆ. ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿರುವ ಸರ್ಕಾರಿ ಶಾಲೆಗಳ ಶಿಕ್ಷಕರು ಗುಣಮಟ್ಟದ ಬೋಧನೆ ಮಾಡಬೇಕಿದೆ ಎಂದರು.

ದುರಸ್ತಿ: ತಾಲೂಕಿನ ಬಹುತೇಕ ಗ್ರಾಮಗಳಲ್ಲಿರುವ ಸರ್ಕಾರಿ ಶಾಲೆಗಳ ನೂತನ ಕಟ್ಟಡ ನಿರ್ಮಾಣ ಪೂರ್ಣಗೊಳಿಸಲಾಗಿದೆ. ಕೆಲವು ಗ್ರಾಮಗಳಲ್ಲಿ ಕಟ್ಟಡಗಳು ತೀರಾ ಹಳೆಯದಾಗಿರುವುದರಿಂದ ಅಂತಹುವುಗಳನ್ನು ಕೆಡವಿ ಹೊಸದಾಗಿ ನಿರ್ಮಿಸಲು ಮೊದಲ ಆದ್ಯತೆ ನೀಡಲಾಗುವುದು. ಸ್ವಲ್ಪಮಟ್ಟಿಗೆ ಶಿಥಿಲವಾಗಿರುವ ಸರ್ಕಾರಿ ಶಾಲೆಗಳನ್ನೂ ದುರಸ್ತಿ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಮೊದಲ ಸ್ಥಾನಕ್ಕೆ ತರಲು ಯತ್ನಿಸಿ: ತಾಲೂಕಿನ ಗಡಿಭಾಗವಾಗಿರುವ ಕಾಮಸಮುದ್ರ ಹೋಬಳಿಯ ಬಹುತೇಕ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿಯಲ್ಲಿಯೂ ಶೇಕಡವಾರು ಅಂಕಗಳನ್ನು ಗಳಿಸುತ್ತಿರುವುದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಹೆಚ್ಚಿನ ಜವಾಬ್ದಾರಿಯಿಂದ ಜಿಲ್ಲೆಯಲ್ಲಿಯೇ ಮೊದಲ ಸ್ಥಾನ ಗಳಿಸಲು ಶ್ರಮಿಸುವಂತೆ ಸಲಹೆ ನೀಡಿದರು.

ದ್ವಿಪಥ ರಸ್ತೆ: ತಾಲೂಕಿನ ಕಾಮಸಮುದ್ರದಲ್ಲಿ ಈಗಾಗಲೇ ಪೊಲೀಸ್‌ ಠಾಣೆ ಕಟ್ಟಡ, ಸರ್ಕಾರಿ ಆಸ್ಪತ್ರೆ ಸೇರಿ ಹೊಸದಾಗಿ ಸರ್ಕಾರಿ ಕಚೇರಿ ಕಟ್ಟಡಗಳನ್ನು ಸುಸಜ್ಜಿತವಾಗಿ ಕಟ್ಟಲಾಗಿದೆ. ಕಾಮಸಮುದ್ರ ಕೇಂದ್ರ ಸ್ಥಾನದಲ್ಲಿ ದ್ವಿಪಥ ರಸ್ತೆ ನಿರ್ಮಾಣ ಸಹ ಮಾಡಿರುವುದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎಂದರು. ಕಾಮಸಮುದ್ರ ಹೋಬ ಳಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿ ಯುವ ನೀರಿನ ಸಮಸ್ಯೆ ಸಂಪೂರ್ಣ ವಾಗಿ ಬಗೆಹರಿಸ ಲಾಗಿದೆ ಎಂದು ವಿವರಿಸಿದರು.

Advertisement

ಬಸ್‌ ನಿಲ್ದಾಣಕ್ಕೆ ಬಳಸಿಕೊಳ್ಳಿ: ಕಾಮಸಮುದ್ರದಲ್ಲಿ ಮುಖ್ಯವಾಗಿ ಬಸ್‌ ನಿಲ್ದಾಣದ ಕೊರತೆ ಇದೆ. ಪ್ರಸ್ತುತ ಸರ್ಕಾರಿ ಆಸ್ಪತ್ರೆ ನೂತನವಾಗಿ ನಿರ್ಮಾಣ ಮಾಡಿರುವುದರಿಂದ, ಹಳೇ ಸರ್ಕಾರಿ ಆಸ್ಪತ್ರೆ ಕಟ್ಟಡ ಜಾಗ ಖಾಲಿ ಇದೆ. ಅದನ್ನು ಯಾವುದಕ್ಕೂ ಉಪಯೋಗಿಸುತ್ತಿಲ್ಲ. ಹೀಗಾಗಿ ಹಳೇ ಕಟ್ಟಡವನ್ನು ತೆರವುಗೊಳಿಸಿ ತಾತ್ಕಾಲಿಕವಾಗಿ ಬಸ್‌ ನಿಲ್ದಾಣವಾಗಿ ಉಪಯೋಗಿಸಿಕೊಳ್ಳುವಂತೆ ಸೂಚನೆ ನೀಡಿದರು.

ನೂತನ ವಾಹನಕ್ಕೆ ಚಾಲನೆ: ತಾಲೂಕಿನ ಕಾಮಸಮುದ್ರ ಗ್ರಾಪಂನಿಂದ ಕಸ ವಿಲೇವಾರಿ ಮಾಡಲು 5 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿ ರುವ ನೂತನ ಕಸವಿಲೇವಾರಿ ವಾಹನವನ್ನು ಈ ಸಂದರ್ಭದಲ್ಲಿ ಶಾಸಕ ಎಸ್‌.ಎನ್‌. ನಾರಾಯಣಸ್ವಾಮಿ ಚಾಲನೆ ನೀಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜ್‌, ಜಿಪಂ ಸದಸ್ಯ ಶಾಹಿದ್‌, ತಾಪಂ ಸದಸ್ಯ ವೆಂಕಟೇಶ್‌, ಜೆಸಿಬಿ ನಾರಾಯಣಪ್ಪ, ಪಂಚಾಯತ್‌ ರಾಜ್‌ ಇಲಾಖೆಯ ಎಇಇ ಎಚ್.ಡಿ.ಶೇಷಾದ್ರಿ, ಎಇ ರವಿಚಂದ್ರನ್‌, ಗ್ರಾಪಂ ಅಧ್ಯಕ್ಷ ಆದಿನಾರಾಯಣ ಕುಟ್ಟಿ, ಪಿಡಿಒ ವಾಣಿ, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೃಷ್ಣಾರೆಡ್ಡಿ, ಮುಖಂಡರಾದ ರಂಗಾಚಾರಿ, ಅಮರೇಶ್‌, ಫೈನಾನ್ಸ್‌ ಚಂದು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next