ಪಿರಿಯಾಪಟ್ಟಣ: ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳ ನೋವಿಗೆ ಸ್ಪಂದಿಸಿದಾಗ ಮಾತ್ರ ಜನರ ಮನದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ತಾಲೂಕಿನ ಬೈಲುಕುಪ್ಪೆಯಲ್ಲಿ 1.70 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ದ್ಯೇಯದೊಂದಿಗೆ ಆಸ್ಪತ್ರೆಯನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡುವುದರ ಜೊತೆಯಲ್ಲಿ ಆಧುನಿಕ ಯಂತ್ರೋಪಕರಣಗಳ ಜತೆಗೆ ಸಿಬ್ಬಂದಿಗಳನ್ನು ಕೂಡ ಕಲ್ಪಸಲಾಗಿದೆ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾರ್ವಜನಿಕರು ಮತ್ತು ಮಹಿಳೆಯರಿಗಾಗಿ ಉತ್ತಮ ಆರೋಗ್ಯ ಸೇವೆಗಳನ್ನು ಕಲ್ಪಿಸಲು ಹಲವು ವಿನೂತನ ಆರೋಗ್ಯ ಸೇವೆಗಳನ್ನು ಜಾರಿಗೊಳಿಸಿದ್ದು, ಪ್ರತಿಯೊಬ್ಬರು ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಕೊರೋನಾ ಮಹಾಮಾರಿಯ ಹೊಡೆತದಿಂದ ಪ್ರತಿಯೊಬ್ಬಆರೋಗ್ಯದ ಬಗ್ಗೆ ಬಹಳ ಕಾಳಜಿ ವಹಿಸುತ್ತಿರುವುದು ಅದರ ಜೊತೆಗೆ ಎಲ್ಲರೂ ನಲುಗಿಹೋಗಿದಂಥ ಸಂದರ್ಭದಲ್ಲಿ ಕರೋನ ವಿರುದ್ಧ ಮೋದಿಯವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದ ನಮ್ಮ ದೇಶ ಸುರಕ್ಷಿತವಾಗಲು ಕಾರಣವಾಯಿತು ಕೊರೋನಾ ಮಹಾಮಾರಿಯ ತಡೆಗಟ್ಟಲು ಬೇಕಾದಂಥ ಪಿಪಿ ಕಿಟ್ ಗಳು. ಮತ್ತು ವ್ಯಾಕ್ಸಿನ್ ಗಳನ್ನು ನಮ್ಮ ಭಾರತದಲ್ಲೇ ಉತ್ಪಾದಿಸಲು ಪ್ರಾರಂಭಿಸಿದ ಮೋದಿಯವರ ಸೇವೆ ಶ್ಲಾಘನೀಯ ಎಂದರು.
ಮುಂದಿನ ದಿನಗಳಲ್ಲಿ ಇಂತಹ ಕರೂನಾ ವಿರುದ್ಧ ಹೋರಾಡುವ ಸಂದರ್ಭದಲ್ಲಿ ಯಾವುದೇ ಲಾಕ್ ಡೌನ್ ಮಾಡದೆ ಪ್ರತಿಯೊಬ್ಬರಿಗೂ ಬೂಸ್ಟರ್ ಡೋಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಬೇಕಿದೆ, ಪಿರಿಯಾಪಟ್ಟಣ ತಾಲ್ಲೂಕಿಗೆ ಮಹಿಳೆ ಹೆರಿಗೆ ಆಸ್ಪತ್ರೆಯು ಅಗತ್ಯತೆ ಇದ್ದು ಈ ಭಾಗದ ಮಹಿಳೆಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನ್ಯೂನ್ಯತೆಗಳು ಹೆಚ್ಚು ಕಂಡುಬರುತ್ತಿದ್ದು ಕೂಡಲೇ ಸಂಬಂಧಪಟ್ಟ ಆರೋಗ್ಯಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜೂನ್ ತಿಂಗಳಲ್ಲಿ ಶ್ರೀರಂಗಪಟ್ಟಣದ ಪಾಲಹಳ್ಳಿಯಿಂದ ಹುಣಸೂರು ಹಾಗೂ ಪಿರಿಯಾಪಟ್ಟಣದಿಂದ ಗುಡ್ಡೆಹೊಸೂರು ಗ್ರಾಮದವರೆಗೆ ಬೈಪಾಸ್ ರಸ್ತೆಯು ಪ್ರಾರಂಭವಾಗುವುದು ಎಂದರು
ಶಾಸಕ ಕೆ.ಮಹದೇವ್ ಮಾತನಾಡಿ ಈ ಭಾಗ ಗಡಿಭಾಗವಾಗಿರುವ ಕಾರಣ ಇಲ್ಲಿನ ಜನರಿಗೆ ಆಸ್ಪತ್ರೆಯ ಅವಶ್ಯಕತೆಯಿತ್ತು. ಹಾಗಾಗಿ ಸರ್ಕಾರ ಇಲ್ಲಿಗೆ ನೂತನ ಕಟ್ಟಡಕ್ಕೆ ಮಂಜೂರಾತಿ ನೀಡಿದ ಕಾರಣ ಇಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡವೊಂದು ನಿರ್ಮಾಣವಾದರೇ ಸಾಲದು ಇಲ್ಲಿ ಕೆಲಸ ಮಾಡುವಂತಹ ವೈದ್ಯರು, ನರ್ಸ್ ಹಾಗೂ ಎಲ್ಲ ಸಿಬ್ಬಂದಿಯಿದ್ದು ಈ ಭಾಗದ ಜನರಿಗೆ ಅನುಕೂಲವಾಗಬೇಕು. ಬಡವರು ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ನಿರ್ಲಕ್ಷಿಸದೆ ತಕ್ಷಣವೇ ವೈದ್ಯರ ಚಿಕಿತ್ಸೆ ಪಡೆಯುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಈ ವ್ಯಾಪ್ತಿಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಬಡವರು, ಕೂಲಿಕಾರ್ಮಿಕರು, ನಿರ್ಗತಿಕರು ವಾಸಿಸುತ್ತಿರುವುದರಿಂದ ಈ ಆಸ್ಪತ್ರೆಗೆ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೇಕು ಬಡವರು ವಾಸಿಸುವ ಸಮೀಪದಲ್ಲಿ ಆಸ್ಪತ್ರೆ ತೆರೆದು, ಗುಣಾತ್ಮಕ ಚಿಕಿತ್ಸಾ ಸೇವೆ ನೀಡಲಾಗುತ್ತಿದೆ. ಎಲೆಕ್ಟ್ರಾನಿಕ್ ಚಿಕಿತ್ಸಾ ಸೇವಾ ಸೌಲಭ್ಯ ಮತ್ತು ಇಲ್ಲಿಗೆ ಬರುವ ರೋಗಿಗಳಿಗೆ ಇಲ್ಲೇ ಔಷಧಿಗಳು ದೊರೆಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರಮೌಳಿ, ತಾಪಂ ಇಒ ಕೃಷ್ಣಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ ಶರತ್ ಬಾಬು , ವೈದ್ಯಾಧಿಕಾರಿ ವಿ.ಎಸ್.ಶಿವಕುಮಾರ್, ಗ್ರಾಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷೆ ಭಾರತಿ, ಮುಖಂಡರಾದ ಆರ್. ಟಿ.ಸತೀಶ್, ಅಣ್ಣಯ್ಯ ಶೆಟ್ಟಿ, ಸಿ ಯ.ಎನ್.ರವಿ, ಮಾನು ಇನಾಯತ್, ವಿವಿಧ ಇಲಾಖೆಯ ಅಧಿಕಾರಿಗಳಾದ ಮಂಜುನಾಥ್, ಜಯಂತ್, ಸೋಮಯ್ಯ, ಸಿದ್ದೇಗೌಡ, ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಗ್ರಾಮಸ್ಥರು ಹಾಜರಿದ್ದರು.