Advertisement
ಸೋಮವಾರ ಬೆಳಪು ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ಉಡುಪಿ ಜಿಲ್ಲೆಯ ಮೊದಲ ಆಮ್ಲಜನಕ ಉತ್ಪಾದನ ಘಟಕ ಮತ್ತು ಕೈಗಾರಿಕಾ ಪ್ರದೇಶದ ಮೂಲಸೌಕರ್ಯಗಳ ಬಗ್ಗೆ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಇದಕ್ಕೆ ಮುನ್ನ ನಂದಿಕೂರಿನ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಕೈಗಾರಿಕೋದ್ಯಮಿಗಳು, ಗ್ರಾ.ಪಂ. ಅಧ್ಯಕ್ಷ ರೊಂದಿಗೆ ಸಂವಹನ ನಡೆಸಿದರು.ಬೆಂಗಳೂರಿನಾಚೆ ಕೈಗಾರಿಕೆಗಳನ್ನು ಬೆಳೆಸಲು ಸರಕಾರ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ.
ಪಡುಬಿದ್ರಿಯಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಸ್ಥಳೀಯ ಗ್ರಾ.ಪಂ.ಗಳಿಗೆ ಆಯಾ ಕೈಗಾರಿಕಾ ಪ್ರದೇಶಗಳಲ್ಲಿರುವ ಘಟಕಗಳಿಂದ ತೆರಿಗೆ ಬಾಕಿ ಇರುವ ಸಮಸ್ಯೆ ರಾಜ್ಯವ್ಯಾಪಿಯಾಗಿ ಇದೆ. ಈ ಬಗ್ಗೆ ಏಕರೂಪದ ಪರಿಹಾರ ರೂಪಿಸಲು ಶೀಘ್ರದಲ್ಲೇ ಕೈಗಾರಿಕಾ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಮಟ್ಟದಲ್ಲಿ ಜಂಟಿ ಸಭೆ ನಡೆಸಿ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಸ್ಥಳೀಯರಿಗೆ ಉದ್ಯೋಗ: ಸರಕಾರ ಬದ್ಧ
ಬೃಹತ್ ಉದ್ದಿಮೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸಿ ಕೊಡಲು ಸರಕಾರ ಬದ್ಧವಾಗಿದೆ. ಉದ್ದಿಮೆಗೆ ಪರವಾನಿಗೆ ನೀಡುವಾಗ ಸ್ತರ -1, ಸ್ತರ-2 ಉದ್ಯೋಗಗಳಲ್ಲಿ ಶೇ. 80ರಷ್ಟು ಮತ್ತು ಸ್ತರ -3, ಸ್ತರ-4 ಉದ್ಯೋಗಗಳಲ್ಲಿ ಶೇ. 100ರಷ್ಟು ಸ್ಥಳೀಯರಿಗೆ ನೀಡಲು ಒಪ್ಪಂದದಲ್ಲಿಯೇ ಸೂಚನೆ ನೀಡಲಾಗುತ್ತಿದೆ. ಇದನ್ನು ಉಲ್ಲಂ ಸುವ ಉದ್ದಿಮೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.