Advertisement

New CBI Director: ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಆಯ್ಕೆ?

02:04 PM May 14, 2023 | Team Udayavani |

ನವದೆಹಲಿ: ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

Advertisement

ಆಯ್ಕೆ ಪಟ್ಟಿಯಲ್ಲಿ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಅವರ ಹೆಸರು ಕೂಡ ಇದೆ ಎನ್ನಲಾಗಿದೆ.

ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಸಿಬಿಐನ ಉನ್ನತ ಹುದ್ದೆಗೆ 3 ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಶನಿವಾರ ಸಂಜೆ ನಡೆದ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮೂರು ಅಧಿಕಾರಿಗಳ ಹೆಸರುಗಳನ್ನು ಪಟ್ಟಿ ಮಾಡಲಾಗಲಿದೆ ಎಂದು ವರದಿ ಉಲ್ಲೇಖಿಸಿದೆ.

ಪ್ರವೀಣ್ ಸೂದ್ (ಕರ್ನಾಟಕ ಡಿಜಿಪಿ), ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಾಸನ್ ಹೆಸರು ಸಿಬಿಐ ನಿರ್ದೇಶಕರ ಆಯ್ಕೆ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

Advertisement

ಪ್ರಸ್ತುತ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅವಧಿಯು ಮೇ 25 ರಂದು ಕೊನೆಗೊಳ್ಳಲಿದೆ.

ಮೂಲಗಳ ಪ್ರಕಾರ, 1985ರ ಐಪಿಎಸ್ ಬ್ಯಾಚ್ ನ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಕರ್ನಾಟಕ ಕೇಡರ್‌ನ ಮೂರನೇ ಐಪಿಎಸ್ ಅಧಿಕಾರಿಯಾಗಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಸೇರಿದ ಸೂದ್ 2020 ಫೆಬ್ರವರಿ 1 ರಂದು ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ನೇಮಕಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next