Advertisement

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗಣ್ಯರಿಂದ ಶುಭಾಶಯ

09:29 AM Jul 28, 2021 | Team Udayavani |

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕವಾದ ಬಸವರಾಜ ಬೊಮ್ಮಾಯಿ ಅವರಿಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೆವೇಗೌಡ ಸೇರಿದಂತೆ ಹಲವು ಗಣ್ಯರು ಅಭಿನಂದನೆ ತಿಳಿಸಿದ್ದಾರೆ.

Advertisement

ಸಿದ್ದರಾಮಯ್ಯ: ರಾಜ್ಯದ ಆಡಳಿತ ಭ್ರಷ್ಟಾಚಾರದಿಂದ ಹೊಲಸೆದ್ದಿರುವ, ದುರಾಡಾಳಿತದಿಂದ ದಿಕ್ಕುತಪ್ಪಿರುವ ಮತ್ತು ಆಂತರಿಕ ಕಚ್ಚಾಟದಿಂದ ನಲುಗಿಹೋಗಿರುವ ಸಂದರ್ಭದಲ್ಲಿ ಸ್ನೇಹಿತ ಬಸವರಾಜ ಬೊಮ್ಮಾಯಿ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ. ಅವರಿಗೆ ಯಶಸ್ಸನ್ನು ಕೋರುತ್ತೇನೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ.

ದಿನೇಶ್ ಗುಂಡೂರಾವ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿಯವರಿಗೆ  ಅಭಿನಂದನೆಗಳು. ಬೊಮ್ಮಾಯಿ ಅವರು Right person in the wrong party ಎಂಬಂತಹ ವ್ಯಕ್ತಿ. ಅವರಿಗೆ ಆಡಳಿತದಲ್ಲಿ ಅನೇಕ ಸವಾಲುಗಳಿವೆ. ಆ ಸವಾಲುಗಳನ್ನು ಮೀರಿ ಜನಹಿತ ಕಾಪಾಡಲಿ ಎಂಬುದೇ ನಮ್ಮ ಆಶಯ.

ಹೆಚ್.ಡಿ ಕುಮಾರಸ್ವಾಮಿ: ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ.

ಹೆಚ್.ಡಿ ದೇವೇಗೌಡ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆದ  ಬೊಮ್ಮಾಯಿ ಅವರಿಗೆ ನನ್ನ ಅಭಿನಂದನೆಗಳು. ಸಿಕ್ಕ ಈ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡುವಿರೆಂದು ಆಶಿಸುತ್ತೇನೆ.

Advertisement

ಡಿ.ಕೆ ಶಿವಕುಮಾರ್: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು. ಆಡಳಿತದ ಮೇಲೆ ಮರಳಿ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಭರವಸೆ ಇರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next