Advertisement
ಇಂದು ವಿಚಾರಣೆ: ಈ ವಾರವೇ ತೀರ್ಪು?ಅಪರಾಹ್ನ 3.30ಕ್ಕೆ ವಿಚಾರಣೆ ನಿಗದಿ; ಎ.ಜಿ. ಶಶಿಕಿರಣ್ ಶೆಟ್ಟಿ ವಾದ ಮಂಡನೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯ ಹಗರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ಮುಂದುವರಿಯಲಿದ್ದು, ರಾಜ್ಯ ಸರಕಾರದ ಪರವಾಗಿ ಅಡ್ವೊಕೇಟ್ ಜನರಲ್ (ಎ.ಜಿ.) ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ.
Related Articles
ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ಖಾಸಗಿ ದೂರುಗಳಿಗೆ ಸಂಬಂಧಿಸಿ ಆದೇಶ ಅಥವಾ ವಿಚಾರಣ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಮತ್ತು ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಆದೇಶ ಆಧರಿಸಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಈ ಹಂತದಲ್ಲಿ ಯಾವುದೇ ಬಲವಂತದ ಅಥವಾ ಆತುರದ ಕ್ರಮ ಜರುಗಿಸುವಂತಿಲ್ಲ ಎಂದು ಹೈಕೋರ್ಟ್ ಆ. 19ರಂದು ನೀಡಿರುವ ಮಧ್ಯಾಂತರ ಆದೇಶ ಈವರೆಗೆ ಮುಂದುವರಿದಿದೆ.
Advertisement
ಸಚಿವ ಎಂ.ಬಿ. ಪಾಟೀಲ್ ಮುಖ್ಯಮಂತ್ರಿಯಾದರೆ ನನ್ನ ಅಭ್ಯಂತರವಿಲ್ಲ. ಸಿದ್ದರಾಮಯ್ಯ ಇರುವವರೆಗೂ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ಬದಲಾವಣೆ ಆಗುವುದಿಲ್ಲ ಎಂಬ ವಿಶ್ವಾಸ ಇದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎಂದರೆ ಯಾಕೆ ಬದಲಾವಣೆ ಆಗಬೇಕು?– ಶಿವಾನಂದ ಪಾಟೀಲ್, ಸಚಿವ ನಾನೂ ಮುಖ್ಯಮಂತ್ರಿ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದೇನೆ. ಆದರೆ ಈಗ ಸಿಎಂ ಆಗಲು ಅಲ್ಲ, ಬದಲಾಗಿ 2028ರಲ್ಲಿ ಆಗುವುದಕ್ಕೆ. ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು. ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ಸನ್ನಿವೇಶವೇ ಇಲ್ಲ. ಸಿದ್ದರಾಮಯ್ಯ ಅವರೇ ಮುಂದುವರಿ ಯುತ್ತಾರೆ ಎನ್ನುವ ನಂಬಿಕೆ ಇದೆ. ಅವರಿಗೆ ಸದಾ ನನ್ನ ಬೆಂಬಲ.
– ಸತೀಶ್ ಜಾರಕಿಹೊಳಿ, ಸಚಿವ ಪ್ರಸ್ತುತ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ ಮುಂದುವರಿಯುತ್ತಾರೆ. ಇದರಲ್ಲಿ ಸಂಶಯ ಬೇಡ. ನನಗೂ ಆಸೆ ಇದೆ. ನಾನೂ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೇನೆ. ಆದರೆ ಆ ಬಗ್ಗೆ ನನಗೆ ದುರಾಸೆ ಇಲ್ಲ. ಮುಂದೆಯೂ ನಾವೆಲ್ಲರೂ ಸಿದ್ದರಾಮಯ್ಯ ಪರವಾಗಿರುತ್ತೇವೆ. ಇದನ್ನು ನಾವೆಲ್ಲ ಜತೆ ಸೇರಿ ಸಚಿವ ಸಂಪುಟದಲ್ಲಿ ನಿರ್ಣಯ ಮಾಡಿದ್ದೇವೆ.
– ಎಂ.ಬಿ. ಪಾಟೀಲ್, ಸಚಿವ ಮುಖ್ಯಮಂತ್ರಿ ಆಗುವ ಯೋಗ್ಯತೆ, ಅರ್ಹತೆ ಎಲ್ಲರಿಗೂ ಇರಬಹುದು. ಆದರೆ ಅದನ್ನು ತೀರ್ಮಾನ ಮಾಡುವವರು ಪಕ್ಷದ ಶಾಸಕರು, ಕೆಪಿಸಿಸಿ ಅಧ್ಯಕ್ಷರು, ಹೈಕಮಾಂಡ್. ಸದ್ಯಕ್ಕಂತೂ ಸಿದ್ದರಾಮಯ್ಯಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದರಲ್ಲಿ ಅನುಮಾನ ಇಲ್ಲ. ಹೀಗಾಗಿ ಈ ಬಗ್ಗೆ ಚರ್ಚಿಸಲು ಸಿಎಂ ಹುದ್ದೆ ಖಾಲಿ ಇಲ್ಲ.
– ಡಿ. ಸುಧಾಕರ್, ಸಚಿವ ಸದ್ಯಕ್ಕಂತೂ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಯಾವುದೇ ಬದಲಾವಣೆಯೂ ಆಗುವುದಿಲ್ಲ. ಮುಡಾ ಹಗರಣ ವಿಷಯದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ಮುಗಿದು ವರದಿ ಬಂದ ಬಳಿಕ ಯಾರೇ ತಪ್ಪು ಮಾಡಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಮುಖ್ಯಮಂತ್ರಿ ಬದಲಾವಣೆ ಅಂತೂ ಸದ್ಯಕ್ಕೆ ಇಲ್ಲ.
-ಬೈರತಿ ಸುರೇಶ್, ಸಚಿವ ಹೊರಗೆ ಸಿದ್ದರಾಮಯ್ಯನವರ ಪರವಾಗಿ ಬಂಡೆ ಹಾಗೆ ನಿಂತಿದ್ದೇವೆ ಅನ್ನುತ್ತಾರೆ. ಆದರೆ ಒಳಗೊಳಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಪರಮೇಶ್ವರ್, ಡಿಕೆಶಿ ಹೀಗೆ ಅನೇಕ ನಾಯಕರು ಸಾಲುಗಟ್ಟಿ ನಿಂತಿದ್ದಾರೆ. ಕಾಂಗ್ರೆಸ್‌ನವರು ಮೊದಲು ತಮ್ಮ ಮನೆ ಸರಿ ಮಾಡಿಕೊಳ್ಳಲಿ. ಅದನ್ನು ಬಿಟ್ಟು ನಾನು ನೀಡಿದ ಹೇಳಿಕೆಗೆ ಟೀಕೆ ಮಾಡುವುದಲ್ಲ.
– ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ