Advertisement
ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಭೇಟಿಗೆ ಅರವಿಂದ್ ಕೇಜ್ರಿವಾಲ್ ಸಮಯ ಕೋರಿದ್ದಾರೆ. ಈ ವೇಳೆ ಅವರು ತಮ್ಮ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಮಾರನೇ ದಿನ, ರವಿವಾರ ಅವರು, 48 ತಾಸುಗಳಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ಮಂದಿ ಪೈಪೋಟಿ?
ತೆರವಾಗಲಿರುವ ಸಿಎಂ ಹುದ್ದೆಗೆ 6 ನಾಯಕರ ಹೆಸರು ಕೇಳಿಬರುತ್ತಿದೆ. ಸಚಿವೆ ಆತಿಷಿ ಮಲೇìನಾ, ಸಚಿವರಾದ ಸೌರಭ್ ಭಾರದ್ವಾಜ್, ಕೈಲಾಶ್ ಗೆಹ್ಲೋಟ್, ಗೋಪಾಲ್ ರೈ ಮತ್ತು ಇಮ್ರಾನ್ ಹುಸೇನ್ ಹೆಸರು ಕೇಳಿಬರುತ್ತಿವೆ. ಕೇಜ್ರಿವಾಲ್ ಪತ್ನಿ ಸುನೀತಾ ಸಿಎಂ ಹುದ್ದೆಗೇರಿದರೆ ಅಚ್ಚರಿ ಪಡಬೇಕಿಲ್ಲ ಎನ್ನಲಾಗುತ್ತಿದೆ.