Advertisement

ಬೆಳಗಾವಿಯ ನೂತನ ಕೋವಿಡ್-19 ಪ್ರಯೋಗಾಲಯಕ್ಕೆ ಚಾಲನೆ

01:10 PM Apr 23, 2020 | Team Udayavani |

ಬೆಳಗಾವಿ : ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-19 ಗೆ ಸಂಬಂಧಿಸಿದ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ ಗುರುವಾರ ಚಾಲನೆ ನೀಡಿದರು.

Advertisement

ಇಲ್ಲಿನ ನೆಹರೂ ನಗರದಲ್ಲಿರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಆವರಣದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಆರಂಭಿಸಲಾಗಿದ

ಸದ್ಯಕ್ಕೆ ಪ್ರತಿದಿನ 90 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯವನ್ನು ಪ್ರಯೋಗಾಲಯ ಹೊಂದಿರುತ್ತದೆ.

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ‌ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ,  ವಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಸತೀಶ್ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ಅಭಯ್ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೋವಿಡ್-19 ನಿಯಂತ್ರಣಾ ಕ್ರಮಗಳ ಉಸ್ತುವಾರಿ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ದೇವಪ್ರಸಾದ ಚಟ್ಟೋಪಾಧ್ಯಾಯ,ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next