Advertisement

ರಾಜ್ಯದಲ್ಲಿ 181 ಹೊಸ ಕೋವಿಡ್‌ ಸೋಂಕು ಪತ್ತೆ: 3 ಮಂದಿ ಕೋವಿಡ್‌ಗೆ ಬಲಿ

08:00 PM Oct 13, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 181 ಕೋವಿಡ್‌ ಸೋಂಕು ಪ್ರಕರಣ ವರದಿಯಾಗಿದ್ದು, 3 ಮಂದಿ ಮೃತಪಟ್ಟಿದ್ದಾರೆ.

Advertisement

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 110 ಮಂದಿಯಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಬಲಿಯಾಗಿದ್ದಾರೆ. ಮೈಸೂರಿನಲ್ಲಿ 10 ಪ್ರಕರಣ ದಾಖಲಾಗಿದ್ದು, ಓರ್ವ ಸೋಂಕಿತ ವ್ಯಕ್ತಿ  ಮೃತಪಟ್ಟಿದ್ದಾನೆ. ಉಳಿದ ಜಿಲ್ಲೆಗಳಲ್ಲಿ ಬೆರಳೆಣಿಕೆಯಷ್ಟು ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು 2,848 ಕೋವಿಡ್‌ ಪ್ರಕರಣಗಳು ಸಕ್ರಿಯವಾಗಿದ್ದು, ಗುರುವಾರ 146 ಮಂದಿ ಬಿಡುಗಡೆ ಹೊಂದಿದ್ದಾರೆ.

ಬೆಂಗಳೂರಿನಲ್ಲಿ ಅತೀ ಹೆಚ್ಚು 2,573 ಕೋವಿಡ್‌ ಕೇಸ್‌ಗಳು ಸಕ್ರೀಯವಾಗಿದ್ದರೆ, ರಾಮನಗರ-43, ಮೈಸೂರು-39, ಬಳ್ಳಾರಿ-33, ದ.ಕನ್ನಡದಲ್ಲಿ 23 ಕೋವಿಡ್‌ ಪ್ರಕರಣ ಪತ್ತೆಯಾಗಿದ್ದು,  ನಂತರದ ಸ್ಥಾನದಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next