Advertisement

77 ದಿನಗಳಲ್ಲೇ ಕಡಿಮೆ: ದೇಶದಲ್ಲಿ 60,471 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

10:10 AM Jun 15, 2021 | Team Udayavani |

ಹೊಸದಿಲ್ಲಿ: ದೇಶದಲ್ಲಿ ಕೋವಿಡ್  19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕಳೆದ 77 ದಿನಗಳಲ್ಲೇ ಕಡಿಮೆ ಸೋಂಕಿತರ ಸಂಖ್ಯೆ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲಾಗಿದೆ. ರಾಷ್ಟ್ರೀಯ ಆರೋಗ್ಯ ಇಲಾಖೆ ನೀಡಿದ ಮಾಹಿತಿಯನ್ವಯ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 60,471 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

Advertisement

ಈ ಅವಧಿಯಲ್ಲಿ ದೇಶದಲ್ಲಿ 2726 ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 3.77 ಲಕ್ಷಕ್ಕೇರಿದೆ. 24 ಗಂಟೆ ಅವಧಿಯಲ್ಲಿ 1,17,525 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ರಿಕವರಿ ದರ 95.54ರಲ್ಲಿದೆ. ಸದ್ಯ 9,133,378 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ:ಎಲ್‌ಜೆಪಿ ಇಬ್ಭಾಗ: ಏಕಾಂಗಿಯಾದ  ಅಧ್ಯಕ್ಷ ಚಿರಾಗ್‌ ಪಾಸ್ವಾನ್‌

ದೇಶದ ಐದು ರಾಜ್ಯಗಳಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡು ಬಂದಿದೆ. ತಮಿಳುನಾಡಿನಲ್ಲಿ 12,772 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 8129 ಸೋಂಕು ಪ್ರಕರಣಗಳು, ಕೇರಳ ರಾಜ್ಯದಲ್ಲಿ 8129 ಸೋಂಕು ಪ್ರಕರಣಗಳು, ಕರ್ನಾಟಕದಲ್ಲಿ 6835 ಪ್ರಕರಣಗಳು ಮತ್ತು ಆಂಧ್ರ ಪ್ರದೇಶ ರಾಜ್ಯದಲ್ಲಿ 4,549 ಸೋಂಕು ಪ್ರಕರಣಗಳು ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next