ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಇಂದು ಮತ್ತೆ 27 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇವರೆಲ್ಲರೂ ಮಹಾರಾಷ್ಟ್ರಸೇರಿದಂತೆ ಅನ್ಯ ರಾಜ್ಯಗಳಿಂದ ಮರಳಿ ಬಂದವರಾಗಿದ್ದಾರೆ.
ಈ 27 ಪ್ರಕರಣಗಳ ಪೈಕಿ 24 ಮಂದಿ ಮಹಾರಾಷ್ಟ್ರ ರಾಜ್ಯದಿಂದ ಬಂದವರಾಗಿದ್ದಾರೆ. ಇಬ್ಬರು ತೆಲಂಗಾಣದಿಂದ ಬಂದಿದ್ದರೆ, ಓರ್ವ ಕೇರಳದಿಂದ ಬಂದ ವ್ಯಕ್ತಿ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾನೆ.
ಇಂದಿನ ಹೊಸ 27 ಕೋವಿಡ್-19 ಸೋಂಕು ಪ್ರಕರಣಗಳ ಕಾರಣ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ. ಈವರೆಗೆ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ಸೋಂಕಿತರು ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ಒಟ್ಟು ಒಂಬತ್ತು ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದವು. ಮಹಾರಾಷ್ಟ್ರದಿಂದ ಹಿಂದುರಿಗಿದವರಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬರುತ್ತಿದೆ.
ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿಂದು ಒಟ್ಟು 75 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2493ಕ್ಕೆ ಏರಿಕೆಯಾಗಿದೆ.