ಹೊಸದಿಲ್ಲಿ: ವಾಯವ್ಯ ದಿಲ್ಲಿಯ ಸಮಯಪುರ ಬದ್ಲಿ ಪ್ರದೇಶದಲ್ಲಿ ಇಬ್ಬರು ಬಾಲಕರ ಮೇಲೆ ಸಹಪಾಠಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಈ ಘಟನೆಯು ಕಳೆದ ಏಪ್ರಿಲ್ ನಲ್ಲಿ ಬೇಸಿಗೆ ಶಿಬಿರದ ವೇಳೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐದರಿಂದ ಆರು ಸಹಪಾಠಿಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರು ಪೊಲೀಸರಿಗೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಲ್ಲಾ ಆರೋಪಿಗಳು ಅಪ್ರಾಪ್ತ ವಯಸ್ಕರು ಎಂದು ಹೇಳಿದ್ದಾರೆ. ಅವರನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ.
ದೆಹಲಿ ಮಹಿಳಿ ಕಲ್ಯಾಣ ಸಮಿತಿಯ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು, “ಸಮಿತಿಯು ಪೊಲೀಸರು ಮತ್ತು ಶಾಲಾ ಮ್ಯಾನೇಜ್ ಮೆಂಟ್ ಗೆ ನೋಟಿಸ್ ನೀಡಿದೆ” ಎಂದಿದ್ದಾರೆ.