Advertisement
ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳ ನಡೆಯುವ ಪ್ರದೇಶವನ್ನೇ ಹೊಸ ಜಿಲ್ಲೆಯಾಗಿ ರಚಿಸಲಾಗಿದ್ದು, “ಮಹಾ ಕುಂಭ ಮೇಳ’ ಎಂದೇ ಆ ಜಿಲ್ಲೆಗೆ ಅಧಿಕೃತ ಹೆಸರನ್ನು ಇರಿಸಿದೆ. ಇದರೊಂದಿಗೆ ಉತ್ತರ ಪ್ರದೇಶದಲ್ಲಿನ ಜಿಲ್ಲೆಗಳ ಸಂಖ್ಯೆ 75ರಿಂದ ಇದೀಗ 76ಕ್ಕೆ ಏರಿಕೆಯಾದಂತಾಗಿದೆ. ಅದರಂತೆ, ಹೊಸ ಜಿಲ್ಲೆಯಲ್ಲಿನ ಕುಂಭ ಮೇಳ ಅಧಿಕಾರಿಗೆ ಇನ್ನು ಮುಂದೆ ಜಿಲ್ಲಾಧಿಕಾರಿಗಿರುವ ಎಲ್ಲ ಅಧಿಕಾರವಿರುತ್ತದೆ ಎಂದು ಸರ್ಕಾರದ ಆದೇಶ ತಿಳಿಸಿದೆ.
ಯಾತ್ರಾರ್ಥಿಗಳ ಸಂಚಾರಕ್ಕೆ ಅನುವಾಗಲು ಹಾಗೂ ಪರಿಸರ ಸ್ನೇಹಿ ಪ್ರಯಾಣ ಖಚಿತಕ್ಕಾಗಿ ಆ್ಯಪ್ ಆಧಾರಿತ ಇ- ರಿಕ್ಷಾ ಸೇವೆಯನ್ನು ಸರ್ಕಾರ ಒದಗಿಸುತ್ತಿದೆ. ಯಾತ್ರಾರ್ಥಿಗಳಿಗಾಗಿ ಟೆಂಟ್ ಸಿಟಿ ನಿರ್ಮಿಸಲಾಗುತ್ತಿದೆ. ವಿಲ್ಲಾ, ಮಹಾರಾಜ, ಸ್ವಿಜ್ ಕಾಟೇಜ್, ಡಾರ್ಮೆಟ್ರಿ ಎಂಬ 4 ವಿಧಗಳ ಟೆಂಟ್ ಇರಲಿದ್ದು, ಐಷಾರಾಮಿ ಸೇವೆಯ 2000 ಸ್ವಿಜ್ ಕಾಟೇಜ್ಗಳನ್ನೂ ನಿರ್ಮಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.